ನವದೆಹಲಿ:

  ಕಣಿವೆ ರಾಜ್ಯದ  ಮಾಚಿಲ್ ಪ್ರದೇಶದಲ್ಲಿ ಸೇನಾ ಠಾಣೆಯ ಮೇಲೆ ಇದ್ದಕ್ಕಿದ್ದಂತೆಯೇ ಭಾರೀ ಹಿಮ ಕುಸಿದ ಪರಿಣಾಮ ಮೂವರು ಯೋಧರು ಹುತಾತ್ಮರಾಗಿದ್ದು, ಮತ್ತೋರ್ವ ಯೋಧ ನಾಪತ್ತೆಯಾಗಿದ್ದಾರೆಂದು ವರದಿಯಾಗಿದೆ.ರಾತ್ರಿ 1 ಗಂಟೆ ಸುಮಾರಿಗೆ ಹಿಮ ಕುಸಿದಿದ್ದು, ಘಟನೆಯಲ್ಲಿ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

   ಸೊನ್ಮಾರ್ಗ್ ನಲ್ಲಿಯೂ ಹಿಮ ಕುಸಿದು ಬಿದ್ದ ಪರಿಣಾಮ 5 ಮಂದಿ ನಾಗರೀಕರು ಸೇರಿ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಉತ್ತರ ಕಾಶ್ಮೀರದಲ್ಲಿ ಕಳೆದ 48 ಗಂಟೆಗಲಲ್ಲಿ ಭಾರೀ ಪ್ರಮಾಣದಲ್ಲಿ ಹಿಮಕುಸಿತ ಸಂಭವಿಸಿದ್ದು, ಬಾರಾಮುಲ್ಲಾ ಜಿಲ್ಲೆಯಲ್ಲಿ ಹಿಮದಡಿ ಸಿಲುಕಿ ಕೊಂಡಿದ್ದ ಯುವತಿಯರನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ