ಬೆಂಗಳೂರು:
ರಾಜ್ಯ ಪ್ರಕೃತಿ ವಿಕೋಪ ಪರಿಹಾರನಿಧಿ (ಎಸ್.ಡಿ.ಆರ್.ಎಫ್) ಯಿಂದ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳಿಗಾಗಿ 31 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ಇಂದಿಲ್ಲಿ ಹೇಳಿದ್ದಾರೆ.
ಪ್ರಕೃತಿ ವಿಕೋಪ ತುರ್ತು ಪರಿಹಾರ ಕಾರ್ಯಗಳಿಗಾಗಿ ಪ್ರತಿಜಿಲ್ಲಾಧಿಕಾರಿಗಳ ಪಿ.ಡಿ. ಖಾತೆಯಲ್ಲಿ 5 ಕೋಟಿ ರೂ. ಲಭ್ಯವಿರುವಂತೆ ನೋಡಿಕೊಳ್ಳಲು ಮತ್ತು ಕೆಲವು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಸಮಸ್ಯೆ ತಲೆ ದೋರಿದ್ದು, ಈ ಜಿಲ್ಲೆಗಳಬೇಡಿಕೆಯನ್ನು ಆಧರಿಸಿ ಈ ಹಣವನ್ನು ಬಿಡುಗಡೆಮಾಡಲಾಗಿದೆ, ಎಂದು ತಿಳಿಸಿದ್ದಾರೆ.
ಈ 31 ಕೋಟಿರೂ. ಹಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ 5 ಕೋಟಿ ರೂ, ಬಾಗಲಕೋಟೆ ಜಿಲ್ಲೆಗೆ 4 ಕೋಟಿ ರೂ, ಬೆಳಗಾವಿ, ವಿಜಯಪುರ, ದಾವಣಗೆರೆ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 3 ಕೋಟಿರೂ, ಬಳ್ಳಾರಿ, ಧಾರವಾಡ, ರಾಯಚೂರು, ಶಿವಮೊಗ್ಗ ಮತ್ತು ಉಡುಪಿ ಜಿಲ್ಲೆಗಳಿಗೆ ತಲಾ 2 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.
ಈ ವರ್ಷದ ಮುಂಗಾರಿನಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳು ಅತಿವೃಷ್ಟಿಯಿಂದ ತತ್ತರಿಸಿದ್ದರೆ, ಉಳಿದ ಜಿಲ್ಲೆಗಳು ಬರಗಾಲಕ್ಕೆ ತುತ್ತಾಗಿವೆ. ಈಗಾಗಲೇ 23 ಜಿಲ್ಲೆಗಳ 86 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ,?? ಎಂದು ಸಚಿವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ