ಮಂಗಳೂರು
ಕಾರು ಕೆರೆಗೆ ಬಿದ್ದು ನಾಲ್ವರು ದಾರುಣವಾಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಸಮೀಪದ ರಾಜ್ಯ ಹೆದ್ದಾರಿಯ ಕೌಡಿಚ್ಚಾರ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯಲ್ಲಿರುವ ಕೆರೆಗೆ ಬಿದ್ದಿದೆ ಎನ್ನಲಾಗಿದ್ದು. ಕಾರಿನಲ್ಲಿ ಗಂಡ, ಹೆಂಡತಿ ಇಬ್ಬರು ಮಕ್ಕಳು ಇದ್ದರು. ಮೃತರು ಮಡಿಕೇರಿ ಶುಂಠಿಕೊಪ್ಪ ನಿವಾಸಿಗಳು ಎಂಬುದಾಗಿ ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ .