ಬೆಂಗಳೂರು
ಬೈಕ್,ಎರಡು ಕಾರು ಹಾಗೂ ಒಂದು ಜೀಪ್‍ನ ನಡುವೆ ಸರಣಿ ಅಪಘಾತ ಸಂಭವಿಸಿ, ಐವರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಗರದ ಹೊರವಲಯದ ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗಾಯಗೊಂಡಿರುವವರನ್ನು ನೆಲಮಂಗಲ ಆಸ್ಪತ್ರೆಗೆ ದಾಖಲಿಸಲಾಗಿದ್ದು ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಅಪಘಾತದಿಂದ ನಾಲ್ಕು ವಾಹನಗಳು ಜಖಂಗೊಂಡಿವೆ ಸರ್ವಿಸ್ ರಸ್ತೆ ಇಲ್ಲದಿರುವುದೇ ಈ ಸರಣಿ ಅಪಘಾತಕ್ಕೆ ಕಾರಣಕ್ಕೆ ಎಂದು ಸ್ಥಳೀಯರು ರಾಷ್ಟ್ರೀಯ ಹೆದ್ದಾರಿಯ ಎರಡು ಮಾರ್ಗಗಳನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಹೀಗಾಗಿ ಎರಡು ಮಾರ್ಗಗಳು ಸಂಪೂರ್ಣ ಸ್ತಬ್ಧವಾಗಿ ಐದಾರು ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿತ್ತು.
ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ದೌಡಾಯಿಸಿದ್ದು, ಪೊಲೀಸರು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ಶುರುವಾಗಿ, ಸರ್ವಿಸ್ ರಸ್ತೆ ಮಾಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.ಪೊಲೀಸರು ಹರಸಾಹಸಪಟ್ಟು ಪ್ರತಿಭಟನಾಕಾರರ ಮನವೊಲಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
