ತಾಲ್ಲೂಕಿನಲ್ಲಿ 5 ಆಂಗ್ಲಮಾಧ್ಯಮಶಾಲೆಗಳ ಪ್ರಾರಂಭ : ಸಿ.ವಿ.ನಟರಾಜ್

ಹಿರಿಯೂರು :

     ಈ ಪ್ರಸಕ್ತ ಸಾಲಿನಲ್ಲಿ ತಾಲ್ಲೂಕಿನಲ್ಲಿ 2 ಕರ್ನಾಟಕ ಪಬ್ಲಿಕ್ ಶಾಲೆಗಳು ಹಾಗೂ 5 ಆಂಗ್ಲಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು ಎಂಬುದಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ವಿ.ನಟರಾಜ್ ಹೇಳಿದರು.ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

      ತಾಲ್ಲೂಕಿನ ಹೊಸಯಳನಾಡು ಗ್ರಾಮದಲ್ಲಿ ಆರಂಭಗೊಳ್ಳಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಒಂದೇ ಶಾಲಾ ಆವರಣದಲ್ಲಿ ಎಲ್‍ಕೆಜಿ, ಯುಕೆಜಿ ಯಿಂದ ದ್ವಿತೀಯ ಪಿಯುಸಿ ವರೆಗೆ ಶಿಕ್ಷಣ ನೀಡಲಾಗುವುದು. ಅದೇ ರೀತಿ ತಾಲ್ಲೂಕಿನ ಮರಡಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯನ್ನೂ ಸಹ ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಪರಿವರ್ತನೆ ಮಾಡಲಾಗಿದೆ. ಈ ಎರಡು ಶಾಲೆಗಳಲ್ಲಿ ಎಲ್‍ಕೆಜಿ ಮತ್ತು ಯುಕೆಜಿ ಹಾಗೂ 1ನೇ ತರಗತಿಯಿಂದಲೇ ಆಂಗ್ಲಮಾಧ್ಯಮದಲ್ಲಿ ಬೋಧಿಸಲಾಗುತ್ತದೆ ಎಂದವರು ಹೇಳಿದರು.

       ತಾಲ್ಲೂಕಿನ ಜಿಎಚ್‍ಪಿಎಸ್ ಹಿರಿಯೂರು ಬಸ್‍ಸ್ಟಾಂಡ್ ಶಾಲೆ, ಜಿಎಚ್‍ಪಿಎಸ್ ಹರಿಯಬ್ಬೆ, ಜಿಎಚ್‍ಪಿಎಸ್ ಯರಬಳ್ಳಿ, ಜಿಎಚ್‍ಪಿಎಸ್ ಹೊಸಯಳನಾಡು ಶಾಲೆಗಳಲ್ಲಿ ಆಂಗ್ಲಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುತ್ತಿದ್ದು, ಈ ಬಗ್ಗೆ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡಲಾಗಿದೆ.ಅಲ್ಲದೆ ಈ ಶಾಲೆಗಳಿಗೆ ಶಾಲಾಬಸ್‍ವ್ಯವಸ್ಥೆಯನ್ನು ಹಳೇವಿದ್ಯಾರ್ಥಿಗಳ ಸಂಘದ ವತಿಯಿಂದ ಮಾಡಲಾಗಿದೆ ಎಂಬುದಾಗಿ ಅವರು ತಿಳಿಸಿದರು.

       ಈಗಾಗಲೇ ನಿಗಧಿತ ವೇಳಾಪಟ್ಟಿಯಂತೆ ಮೇ 29ರಂದು ತಾಲ್ಲೂಕೀನಾದ್ಯಂತ ಸರ್ಕಾರಿ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ಆ ದಿನ ಶಾಲೆಗಳನ್ನು ತಳಿರುತೋರಣಗಳಿಂದ ಸಿಂಗರಿಸುವುದು ಸೇರಿದಂತೆ ಎಲ್ಲಾ ಅಗತ್ಯ ಪೂರ್ವಸಿದ್ದತೆ ಮಾಡಿಕೊಳ್ಳಲು ಈ ಶಾಲೆಗಳ ಮುಖ್ಯಶಿಕ್ಷಕರುಗಳಿಗೆ ತಿಳಿಸಲಾಗಿದೆ.

       ಈಗಾಗಲೇ ಈ ಎಲ್ಲಾ ಶಾಲೆಗಳಿಗೆ ಅಗತ್ಯವಿರುವ ಉಚಿತ ಸಮವಸ್ತ್ರ, ಉಚಿತ ಪಠ್ಯಪುಸ್ತಕಗಳನ್ನು ನೀಡಲಾಗಿದ್ದು, ಈ ಪುಸ್ತಕ ಹಾಗೂ ಸಮವಸ್ತ್ರಗಳನ್ನು ಶಾಲಾ ಪ್ರಾರಂಭೋತ್ಸವದ ದಿನ ಎಸ್‍ಡಿಎಂಸಿ ಸಮಿತಿ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ಅವರು ತಿಳಿಸಿದರು.ಈ ಸುದ್ದಿಗೋಷ್ಠಿಯಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ರಾಘವೇಂದ್ರ, ಅಕ್ಷರದಾಸೋಹ ಅಧಿಕಾರಿಗಳಾದ ನಾಗರಾಜಾಚಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap