ಕೊವಿಡ್ 19 ಕರ್ತವ್ಯಕ್ಕೆ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿ ನಿಯೋಜಿಸಬಾರದು :ಪ್ರವೀಣ್ ಸೂದ್

ಬೆಂಗಳೂರು:

    ಮಾಹಮಾರಿ ಕೊರೊನಾ ವೈರಸ್ ಹರಡದಂತೆ ತಡೆಯುವ ಕರ್ತವ್ಯ ಮತ್ತು ಇತರ ಕಾರ್ಯಾಚರಣೆಗಳಿಗೆ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಯನ್ನು ‌ನಿಯೋಜಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿದೇಶಕ (ಡಿಜಿ- ಐಜಿಪಿ) ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

     ಮಧುಮೇಹ, ರಕ್ತದೊತ್ತಡ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ರಸ್ತೆಯ ಮೇಲಿನ ತಪಾಸಣೆ ಮತ್ತಿತರ ಕರ್ತವ್ಯಗಳಿಗೆ ನಿಯೋಜಿಸಬಾರದು. ಅಂತಹ ಸಿಬ್ಬಂದಿಯನ್ನು ಪೊಲೀಸ್ ಠಾಣೆಯ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಕರ್ತವ್ಯಕ್ಕೆ ಹಾಕಬೇಕು ಎಂದು ಪ್ರವೀಣ್ ಸೂದ್ ಆದೇಶದಲ್ಲಿ ತಿಳಿಸಿದ್ದಾರೆ.

     ವಯಸ್ಸಾದವರನ್ನು ಹಾಗೂ ಕಾಯಿಲೆ ಇರುವವರನ್ನ ಕೋವಿಡ್ ಬಾಧಿಸುವುದು ಹೆಚ್ಚು. ಸಿಬ್ಬಂದಿಯ ಆರೋಗ್ಯ ಕಾಪಾಡುವುದು ನಮ್ಮ ಕೆಲಸವಾಗಿದೆ. ಹೀಗಾಗಿ 55 ವರ್ಷ ಮೇಲ್ಪಟ್ಟವರನ್ನ ರಸ್ತೆ,  ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ಕರ್ತವ್ಯಕ್ಕೆ ಹಾಕಬಾರದು. ಸ್ಟೇಷನ್ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಡ್ಯೂಟಿ ಒದಗಿಸಬೇಕು ಎಂದು ರಾಜ್ಯದ ಎಲ್ಲಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap