ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ 58 ಬೆಡ್‍ಗಳ ವ್ಯವಸ್ಥೆ : ಗೃಹ ಸಚಿವ

ಹಾವೇರಿ
 
    ಕೋವಿಡ್ ಸೋಂಕಿತರ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಯಲ್ಲಿ 58 ಬೆಡ್‍ಗಳ ವ್ಯವಸ್ಥೆ ಮಾಡಲಾಗಿದೆ. ಈ ಮೊದಲು 1 ಬೆಡ್‍ಗೆ ಐ.ಸಿ.ಯು  ವ್ಯವಸ್ಥೆ ಇತ್ತು, ಈಗ ಹೊಸದಾಗಿ ಮತ್ತೆ 10 ಬೆಡ್‍ಗಳಿಗೆ ಐ.ಸಿ.ಯು  ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಗೃಹ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
     ನಗರದ ಜಿಲ್ಲಾ ಆಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಕೋವಿಡ್ ಚಿಕಿತ್ಸೆ ಸಿದ್ಧತೆಗಳ ಪರಿಶೀಲನೆ ನಡೆಸಿದ ಅವರು ಮಾಧ್ಯಮ ದವರೊಂದಿಗೆ ಮಾತನಾಡಿ, ಈಗಾಗಲೇ ಜಿಲ್ಲೆಗೆ 11 ವೆಂಟಿಲೇಟರ್‍ಗಳು ಬಂದಿದ್ದು, ಅವುಗಳ ಅಳವಡಿಕೆಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
    ಗ್ರೀನ್ ಜೋನ್‍ನಲ್ಲಿದ್ದ ಹಾವೇರಿ ಜಿಲ್ಲೆಗೆ ಮುಂಬೈನಿಂದ ಬಂದ ವಕ್ತಿಗಳಲ್ಲಿ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರವುದು ದುರ್ದೈದ ಸಂಗತಿಯಾಗಿದೆ. ಸವಣೂರ ಸೋಂಕಿತ ವ್ಯಕ್ತಿಗಳ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕ ವ್ಯಕ್ತಿಗಳ ಕೋವಿಡ್ ತಪಾಸಣೆ ನಡೆಸಲಾಗಿದ್ದು, ಎಲ್ಲರ ವರದಿ ಸಹ ನೆಗಟಿವ್ ಬಂದಿವೆ. ಅದೇ ರೀತಿ  ಅಂದಲಗಿ ಪ್ರಕಣದದಲ್ಲಿ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕ ವ್ಯಕ್ತಿಗನ್ನು ಕ್ವಾರಂಟೈನ್ ಮಾಡಲಾಗಿದೆ ಹಾಗೂ ಕೋವಿಡ್ ತಪಾಸಣೆ ನಡೆಸಲಾಗುತ್ತಿದೆ. ಕಂಟೋನ್ಮೆಂಟ್ ಜೋನ್‍ನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕ್ವಾರಂಟೈನ್ ಕೇಂದ್ರಗಳ ಮೇಲೆ  ಹಾಗೂ ವಿಶೇಷವಾಗಿ ಹೊರಗಡೆಯಿಂದ ಬರುವವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಹಾವೇರಿ ಜಿಲ್ಲೆಯನ್ನು ಗ್ರೀನ್ ಜಿಲ್ಲೆಯಾಗಿಸಲು ಜಿಲ್ಲಾಡಳಿತ ಅಗತ್ಯ ಕ್ರಮಕೈಗೊಂಡಿದೆ ಎಂದು ತಿಳಿಸಿದರು.
 
     ಲಾಕ್‍ಡೌನ್ ಸಂದರ್ಭದಲ್ಲಿ  ರಾಜ್ಯ ಹಾಗೂ ಜಿಲ್ಲಾ ಗಡಿ ಭಾಗದಲ್ಲಿ  ನಿಯಂತ್ರಣ ಕಾರ್ಯದಲ್ಲಿ ಪೊಲೀಸ್ ಇಲಾಖೆ  ಜವಾಬ್ದಾರಿಯಿಂದ ಕಾರ್ಯನಿರ್ವಹಿಸುತ್ತಿದೆ. ಆಸ್ಪತ್ರೆ, ಸಾರ್ವಜನಿಕ ಸ್ಥಳಗಳಲ್ಲಿ, ಬಸ್ ನಿಲ್ದಾಣ ಹಾಗೂ ಚೆಕ್‍ಪೋಸ್ಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಇಲಾಖೆಯ ಸಿಬ್ಬಂದಿಗಳ ತಪಾಸಣೆ ಸೂಚಿಸಲಾಗಿದೆ ಹಾಗೂ ಈ ಸಿಬ್ಬಂದಿಗೆ ಪಿಪಿ ಕೊಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.
     ಅಂತರ್ ಜಿಲ್ಲಾ ಪ್ರವಾಸಕ್ಕೆ ಯಾವುದೇ ಅತಡೆಗಡೆಗಳಲ್ಲಿ. ಆದರೆ ಅಂತರಾಜ್ಯ ಪ್ರಯಾಣಕ್ಕೆ ಕಡ್ಡಾಯವಾಗಿ ಸೇವಾ ಸಿಂಧು ನೊಂದಣಿ ಮೂಲಕ ಪಾಸ್ ಪಡೆಯಬೇಕು. ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಲೋಪದ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಚ್ಚಿನ ಸಂಖ್ಯೆಯಲ್ಲಿ ಹೊರ ರಾಜ್ಯದವರು ಬಂದ ಸಂದರ್ಭದಲ್ಲಿ ವ್ಯತ್ಯಾಸ ವಾಗಿರಬಹುದು. ಆದಾಗ್ಯೂ  ಕ್ವಾರಂಟೈನ್ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.   ಅದೇ ಶ್ರದ್ಧಾಂಜಲಿ ವಾಹನ ಸೇವೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ  ಉತ್ತರಿಸಿದ ಸಚಿವರು ಶ್ರದ್ಧಾಂಜಲಿ ವಾಹನ ಚಾಲನೆಗೆ ಶೀಘ್ರ ವ್ಯವಸ್ಥೆ ಮಾಡಲಾಗುವುದು ಎಂದು ಭರವಸೆ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap