ಬೆಳಗಾವಿ : ಜಿಲ್ಲೆಯ 6 ಸೇತುವೆ ಜಲಾವೃತ..!!

 ಬೆಳಗಾವಿ:

     ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ಹರಿಯುವ ಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ಹಾಗೂ ದೂಧಗಂಗಾ ನದಿಗಳು ತುಂಬಿ ಹರಿಯುತ್ತಿದ್ದು, ನೀರಿನ ಒಳಹರಿವಿನಲ್ಲಿ ಪ್ರಮಾಣದಲ್ಲಿ ಸಾಕಷ್ಟು ಏರಿಕೆಯಾಗಿದೆ ಎಂದು ತಿಳಿದು ಬಂದಿದೆ.

    ಉಪ ನದಿಗಳು ತುಂಬಿ ಹರಿಯುತ್ತಿರುವ ಕಾರಣ ಬೆಳಗಾವಿ ಜಿಲ್ಲೆಯ  6 ಸೇತುವೆಗಳು ಜಲಾವೃತಗೊಂಡಿವೆ. ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಲ್ಲೋಳ-ಯಡೂರ, ಕಾರದಗಾ-ಭೋಜ,ಭೊಜವಾಡಿ-ಕುಣ್ಣೂರ,ಸಿದ್ನಾಳ – ಅಕ್ಕೋಳ,ಜತರಾಟ- ಭೀವಶಿ ಹಾಗೂ  ಮಲಿಕವಾಡ- ದತ್ತವಾಡ ಗಳಿಗೆ ಸಂಪರ್ಕ ಕಲ್ಪಿಸುವ ಈ 6 ಸೇತುವೆಗಳು ಮುಳುಗಡೆಯಾಗಿ ಅಲ್ಲಿನ ಗ್ರಾಮಗಳು ಸಂಪರ್ಕವನ್ನು ಕಡಿದುಕೊಂಡಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap