ಬೆಂಗಳೂರು
ಭಾರಿ ಸಂಚಲನ ಮೂಡಿಸಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು .4ವರ್ಷದ ಹಿಂದೆ ನಡೆದಿದ್ದ ಯೋಗೀಶ್ ಗೌಡ ಕೊಲೆ ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ಸಿಬಿಐ ಆರು ಮಂದಿ ಸುಪಾರಿ ಹಂತಕರನ್ನು ಬಂಧಿಸಿದೆ ,ಸುಫಾರಿ ಪಡೆದು ಯೋಗೀಶ್ ಗೌಡ ಅವರ ಕೊಲೆ ಮಾಡಿದ್ದರು ಎಂದು ತಿಳಿದು ಬಂದಿದೆ.
ಜಿಲ್ಲಾ ಪಂಚಾಯಿತಿ ಸದಸ್ಯ ಆಗಿದ್ದ ಯೋಗೀಶ್ ಗೌಡ ಅವರನ್ನು 2016 ರ ಜೂನ್ 15 ರಂದು ಆರು ಮಂದಿಯ ಗುಂಪೊಂದು ಜಿಮ್ನಲ್ಲಿ ಬೆಳ್ಳಂಬೆಳ್ಳಿಗ್ಗೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿತ್ತು.ಈ ಕೊಲೆ ರಾಜಕೀಯ ಪ್ರೇರಿತ ಕೊಲೆ ಎಂಬ ಆರೋಪ ಜೋರಾಗಿ ಕೇಳಿಬಂದಿತ್ತು. ಆಗ ಸಚಿವರಾಗಿದ್ದ ವಿನಯ್ ಕುಲಕರ್ಣಿ ವಿರುದ್ಧವೂ ಆರೋಪ ಕೇಳಿಬಂದಿತ್ತು. ಆದ್ದರಿಂದ ಪ್ರಕರಣವನ್ನು ಸಿಬಿಐ ಗೆ ವಹಿಸಲಾಗಿ ಸಿಬಿಐ ಈಗ ಆರು ಮಂದಿಯನ್ನು ಬಂಧಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ