ತುಮಕೂರು:
ತುಮಕೂರು ಜಿಲ್ಲೆಯಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆಯೂ ಅಧಿಕವಾಗುತ್ತಿ ರುವುದರಿಂದ ಉಸಿರಾಟದ ಸಮಸ್ಯೆಯಿರುವ ರೋಗಿಗಳಿಗೆ ಕೃತಕ ಆಮ್ಲಜನಕ ಪೂರೈಕೆಯಲ್ಲಿ ವ್ಯತ್ಯಯವಾಗ ಬಾರದೆಂದು ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಲ್ಲಿ ಆ್ಯಕ್ಸಿಜನ್ ಪ್ಲ್ಯಾಂಟ್‍ನ್ನು ಮಾಜಿ ಸಚಿವರು ಹಾಗೂ ಬಾಗಲಕೋಟೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಂಜಯ್‍ಕುಮಾರ್ ಸರ್ ನಾಯಕ್‍ರವರು ತಿಳಿಸಿದರು.
ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯ ಆವರಣದಲ್ಲಿ ಅ.16 ರಂದು 6000 ಲೀಟರ್ ಆ್ಯಕ್ಸಿಜನ್ ಪ್ಲ್ಯಾಂಟ್‍ನ್ನು ಉದ್ಟಾಟಿಸಿದ್ದರು.
ತುಮಕೂರಿನ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಲ್ಲೂ ಲಿಕ್ವಿಡ್ ಮೆಡಿಕಲ್ ಆ್ಯಕ್ಸಿಜನ್ ಪ್ಲ್ಯಾಂಟ್‍ನ್ನು ಲೋಕಾರ್ಪಣೆಗೊಳಿಸಿದ್ದು ಸುಮಾರು 6000 ಲೀಟರ್ ಸಾಮಥ್ರ್ಯ ಹೊಂದಿರುವ ರೋಗಿಗಳ ಅನುಗುಣವಾಗಿದೆ. ಇತ್ತೀಚಿಗೆ ಮಾರುಕಟ್ಟೆಯಲ್ಲಿ ಆ್ಯಕ್ಸಿಜನ್ ಕೊರತೆಯಿದ್ದರು, ರೋಗಿಗಳಿಗೆ ವೈದ್ಯರು ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಆ್ಯಕ್ಸಿಜನ್ ನಿರಂತರ ಪೂರೈಕೆಗೆ ಸಹಾಯಕವಾಗಲಿದೆ ಎಂದು ಶ್ರೀದೇವಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‍ರವರು ತಿಳಿಸಿದರು.
ಇತ್ತೀಚಿಗೆ ಕೊರತೆಯಿದ್ದರೂ ಶ್ರೀದೇವಿ ಆಸ್ಪತ್ರೆಯಲ್ಲಿ ಅತ್ಯುತ್ತಮ ಚಿಕಿತ್ಸೆಯನ್ನು ನೀಡಲಾಗುತ್ತಿದೆ.
ಇಲ್ಲಿಯವರೆಗೂ ಸುಮಾರು 500 ಕ್ಕೂ ಹೆಚ್ಚು ರೋಗಿಗಳು ಗುಣಮುಖರಾಗಿದ್ದು, ಅತೀ ಕಡಿಮೆ ವೆಚ್ಚದಲ್ಲಿ ಉತ್ತಮ ದರ್ಜೆ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಪ್ರತ್ಯೇಕವಾದ ಕೋವಿಡ್ ಆರ್.ಟಿ-ಪಿ.ಸಿ.ಆರ್ ವೆಂಟಿಲೇಟರ್‍ಗಳು ಸ್ಪೆಷಲ್ ವಾರ್ಡ್, ಸಾಮಾನ್ಯ ವಾರ್ಡ್‍ಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಇಷ್ಟೊಂದು ಒಳ್ಳೆಯ ಕೆಲಸ ಮಾಡುತ್ತಿರುವುದು ಶ್ರೀದೇವಿ ಆಸ್ಪತ್ರೆಗೆ ಶ್ಲಾಘನೀಯವೆಂದು ಮಾಜಿ ಸಚಿವರಾದ ಹೆಚ್.ವೈ.ಮೇಟಿರವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀದೇವಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್, ಶ್ರೀದೇವಿ ವೈದ್ಯಕೀಯ ನಿರ್ದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್, ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್.ಪಾಟೀಲ್, ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಡಿ.ಕೆ.ಮಹಾಬಲರಾಜು, ಉಪ ಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿ, ಶ್ರೀದೇವಿ ವೈದ್ಯಕೀಯ ಅಧೀಕ್ಷಕರಾದ ಡಾ.ಚೆನ್ನಮಲ್ಲಯ್ಯ, ಶ್ರೀದೇವಿ ಚಾರಿಟಬಲ್ ಟ್ರಸ್ಟ್‍ನ ಅಂಬಿಕಾ, ಡಾ.ಲಾವಣ್ಯ, ಶ್ರೀದೇವಿ ಮ್ಯಾರ್ಕೆಟಿಂಗ್ ಮ್ಯಾನೇಜರ್ ಪಿ.ಸತೀಶ್, ಶ್ರೀದೇವಿ ನರ್ಸಿಂಗ್ ಅಧೀಕ್ಷಕರಾದ ಆರ್.ಆನಂದ್, ಬಯೋಮೆಡಿಕಲ್ ಇಂಜಿನಿಯರ್ ಕಾಂತರಾಜು ಹಾಗೂ ವಿವಿಧ ವಿಭಾಗದ ವೈದ್ಯರು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ