ಬೆಂಗಳೂರು:
ಪ್ರಯಾಣಿಕರ ಸುರಕ್ಷತೆಗಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮುಂದಿನ ದಿನಗಳಲ್ಲಿ 65 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಬಿಎಂಆರ್ ಸಿಎಲ್ ತಿಳಿಸಿದೆ.
ಈ ಮೊದಲು ಮೆಟ್ರೋದ ಬೋಗಿಯೊಂದರಲ್ಲಿ 300 ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಕೊರೋನಾದಿಂದಾಗಿ ಇನ್ನು ಮುಂದೆ ಹೊಸ ನಿಯಮ ಜಾರಿಗೆ ತರಲಾಗುವುದುವು, ಸ್ಮಾರ್ಟ್ ಕಾರ್ಡ್ ಇದ್ದವರಿಗೆ ಮಾತ್ರ ಪ್ರಯಾಣಿಸಲು ಅವಕಾಶ, ಜೊತೆಗೆ ಪ್ರಯಾಣಿಕರು ತಮ್ಮ ಮೊಬೈಲ್ ನಲ್ಲಿ ಆರೋಗ್ಯ ಸೇತು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.
ಮೆಟ್ರೋದಲ್ಲಿ ಸಂಚರಿಸುವವರು ಆನ್ ಲೈನ್ ನಲ್ಲಿ ರೀಚಾರ್ಜ್ ಮಾಡಿಸಿಕೊಳ್ಳಬೇಕಾಗಿದೆ ಎಂದು ಬಿಎಂಆರ್ ಸಿಎಲ್ ನಿರ್ದೇಶಕ ಅಜಯ್ ಸೇಠ್ ಹೇಳಿದ್ದಾರೆ. ರೈಲು ಆಪರೇಟರ್ (ಲೊಕೊ ಪೈಲಟ್) ತರಬೇತುದಾರರ ತೂಕವನ್ನು ಆಧರಿಸಿ ಅಂದಾಜು ಮಾಡಿ ನಿರ್ಧರಿಸುತ್ತಾರೆ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ