ತುಮಕೂರು
ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಮುಂದುವರೆದಿದೆ. ಗುರುವಾರ 67 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೆ. ಸೋಂಕಿಗೆ ಐದು ಜನ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿನಿಂದ ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಗುರುವಾರ ಹೊಸದಾಗಿ ಕಾಣಿಸಿಕೊಂಡ 67 ಪಾಸಿಟೀವ್ ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 931 ಆಗಿದೆ. ತುಮಕೂರು ತಾಲ್ಲೂಕಿನಲ್ಲಿ ಪಾಸಿಟೀವ್ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ, ಗುರುವಾರ ಮತ್ತೆ 26 ಜನರಿಗೆ ಖಚಿತವಾಗಿದ್ದು, ತಾಲ್ಲೂಕಿನಲ್ಲಿ ಸೋಂಕಿತರ ಸಂಖ್ಯೆ 400ಕ್ಕೆ ಏರಿದೆ.
ಗುರುವಾರ 5 ಜನರು ಮೃತಪಟ್ಟಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು 35 ಜನ ಮೃತಪಟ್ಟಿದ್ದಾರೆ. ಇದರಲ್ಲಿ ತುಮಕೂರು ತಾಲ್ಲೂಕಿನ 24, ಗುಬ್ಬಿ, ಕುಣಿಗಲ್, ಶಿರಾ ತಾಲ್ಲೂಕಿನ ತಲಾ ಇಬ್ಬರು ಹಾಗೂ ಚಿಕ್ಕನಾಯಕನಹಳ್ಳಿ, ಕೊರಟಗೆರೆ, ಮಧುಗಿರಿ, ಪಾವಗಡ ಹಾಗೂ ತಿಪಟೂರು ತಾಲ್ಲೂಕಿನಲ್ಲಿ ತಲಾ ಒಬ್ಬರು ಕೊರೊನಾಗೆ ಬಲಿಯಾಗಿದ್ದಾರೆ ಎಂದು ಡಿಹೆಚ್‍ಓ ಡಾ.ನಾಗೇಂದ್ರಪ್ಪ ತಿಳಿಸಿದ್ದಾರೆ.
ಗುರುವಾರ ವರದಿಯಾದ 67 ಪ್ರಕರಣ ಸೇರಿ ಜಿಲ್ಲೆಯಲ್ಲಿ 931 ಜನ ಕೋವಿಡ್ ಸೋಂಕಿತರಿದ್ದಾರೆ. ಇವರಲ್ಲಿ ತುಮಕೂರು ತಾಲ್ಲೂಕಿನ 26 ಜನರಲ್ಲಿ ಕೋವಿಡ್ ವೈರಸ್ ಖಚಿತವಾಗಿದೆ. ಗುಬ್ಬಿ ತಾಲ್ಲೂಕಿನಲ್ಲಿ 9, ಮಧುಗಿರಿ ತಾಲ್ಲೂಕಿನಲ್ಲಿ 7, ಪಾವಗಡ ತಾಲ್ಲೂಕಿನಲ್ಲಿ 6, ಕುಣಿಗಲ್ ಹಾಗೂ ತಾಲ್ಲೂಕಿನಲ್ಲಿ ತಲಾ 5, ಶಿರಾ ತಾಲ್ಲೂಕಿನ 4, ಚಿಕ್ಕನಾಯಕನಹಳ್ಳಿ ಹಾಗೂ ತಿಪಟೂರು ತಾಲ್ಲೂಕಿನ ತಲಾ ಇಬ್ಬರಿಗೆ ಸೋಂಕು ಕಾಣಿಸಿದೆ. ಇವರಲ್ಲಿ 17 ಪುರುಷರು, 50 ಮಹಿಳೆಯರು ಸೇರಿದ್ದಾರೆ. 60 ವರ್ಷ ವಯಸ್ಸಿನ ಮೇಲ್ಪಟ್ಟ 12 ಜನ ಇದ್ದಾರೆ.
ಈವರೆಗೆ ಜಿಲ್ಲೆಯಲ್ಲಿ ವರದಿಯಾಗಿರುವ ಒಟ್ಟು 931 ಸೋಂಕು ಪ್ರಕರಣಗಳಲ್ಲಿ ತುಮಕೂರು ತಾಲ್ಲೂಕಿನಲ್ಲಿ 400, ಪಾವಗಡ ತಾ. 87, ಶಿರಾ 77, ಕುಣಿಗಲ್ ತಾ. 78, ಮಧುಗಿರಿ ತಾ. 76, ಚಿಕ್ಕನಾಯಕನಹಳ್ಳಿ ತಾ. 51, ಗುಬ್ಬಿ ತಾ. 49, ಕೊರಟಗೆರೆ ತಾ. 47, ತಿಪಟೂರು ತಾ. 34, ತುರುವೇಕೆರೆ ತಾ. 32 ಪ್ರಕರಣ ವರದಿಯಾಗಿವೆ.
ಬುಧವಾರ ಗುಣಮುಖರಾಗಿ ಆಸ್ಪತ್ರೆಯಿಂದ 3 ಮಂದಿ ಬಿಡುಗಡೆಯಾಗಿದ್ದು, ಈವರೆಗೆ 488 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 408 ಸಕ್ರಿಯ ಪ್ರಕರಣಗಳಿವೆ. ಮಧುಮೇಹ, ಅಧಿಕ ರಕ್ತದ ಒತ್ತಡ, ಜ್ವರ, ಕೆಮ್ಮು, ಶೀತ ಇತರೆ ರೋಗ ಲಕ್ಷಣಗಳಿದ್ದರೆ ತಕ್ಷಣ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ ಎಂದು ಡಿಹೆಚ್‍ಓ ಡಾ.ನಾಗೇಂದ್ರಪ್ಪ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ