ಬೆಳಗಾವಿ
6ನೇ ವೇತನ ಆಯೋಗ ಸಲ್ಲಿಸಿರುವ ಎರಡನೇ ವರದಿಯ ಶಿಫಾರಸ್ಸುಗಳನ್ನು ಮುಂದಿನ ವರ್ಷದ ಬಜೆಟ್ನಲ್ಲಿ ಜಾರಿಗೊಳಿಸಲು ಪರಿಶೀಲನೆ ನೆಡಸಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಧಾನಸಭೆಗಿಂದು ತಿಳಿಸಿದ್ದಾರೆ.
ಪ್ರಶ್ನೊತ್ತರ ಕಲಾಪದಲ್ಲಿ ಹರಿಹರದ ಶಾಸಕ ಎಸ್.ರಾಮಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವೇತನ ಆಯೋಗದ ಮೊದಲನೆ ವರದಿ ಶಿಫಾರಸ್ಸುಗಳನ್ವಯ ಏಪ್ರಿಲ್ 30 ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಲಾಗಿದೆ. ಈ ವರ್ಷದ ಜುಲೈನಲ್ಲಿ ನೀಡಿದ ಎರಡನೇ ವರದಿಯನ್ನು ಮುಂದಿನ ಬಜೆಟ್ ನಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಪರಿಶೀಲಿಸಲಾಗುವುದು. ಆರ್ಥಿಕ ಹೊಣೆಗಾರಿಕೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಶಿಫಾರಸ್ಸುಗಳನ್ನು ಜಾರಿಗೆ ತರಲಾಗುವುದು ಎಂದು ಸದನಕ್ಕೆ ಮಾಹಿತಿ ನೀಡಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ