ಬೆಂಗಳೂರು
ರಾಜ್ಯದಲ್ಲಿ ಮಳೆ ಆರ್ಭಟ ಹೆಚ್ಚಾಗುವ ಸಾಧ್ಯತೆಗಳಿವೆ. ಹಾಗಾಗಿ ಕರ್ನಾಕಟದ ಏಳು ಜಿಲ್ಲೆಗಳಲ್ಲಿ ಆ. 13ರವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಬಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಆದ ಕಾರಣದಿಂದ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲ್ಲಿ ಆ. 13ರವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಮಳೆಯಬ್ಬರದಿಂದ ರಾಜ್ಯದಲ್ಲಿ ಇದುವರೆಗೂ 13 ಜನ ಸಾವನ್ನಪ್ಪಿದ್ದಾರೆ. ಆದ್ದರೀಂದ ಕರಾವಳಿ ಭಾಗದಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಡ್ಯಾಂಗಳು ಬಹುತೇಕ ಭರ್ತಿ
ರಾಜ್ಯದ ಪ್ರಮುಖ ಜಲಾಶಯಗಳಾದ ಕೆಆರ್‍ಎಸ್, ಹಾರಂಗಿ, ಹೇಮಾವತಿ, ಕಬಿನಿ ಡ್ಯಾಂಗಳು ಬಹುತೇಕ ಭರ್ತಿಯಾಗಿವೆ. ಕರ್ನಾಟಕದಲ್ಲಿ 80 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1,600 ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. 28 ಮನೆಗಳು ಸಂಪೂರ್ಣ ಹಾನಿಯಾಗಿವೆ. 2,140 ಮನೆಗಳು ಬಹುತೇಕ ಹಾನಿಗೊಳಗಾಗಿವೆ. ರಾಜ್ಯದ 31,541 ಹೆಕ್ಟೇರ್ ಬೆಳೆ ಮತ್ತು 35,000 ತೋಟಗಾರಕಾ ಬೆಳೆಗಳು ಮಳೆಯಿಂದ ನಾಶವಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ