ಮತ್ತೆ 7 ಜನ ಕಿಲ್ಲರ್ ಕೊರೊನದಿಂದ ಗುಣಮುಖ

ದಾವಣಗೆರೆ
    ಕೊರೊನಾ ಸೋಂಕು ತಗುಲಿ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ ಏಳು ಜನರನ್ನು ಶುಕ್ರವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಈ ವರೆಗೂ ಒಟ್ಟು 21 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವುದು ಸಾರ್ವಜನಿಕರಲ್ಲಿ ಸಂತಸ ಉಂಟು ಮಾಡಿದೆ.
     ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆ ಹಚ್ಚಾಗುತ್ತಿರುವ ಕಾರಣ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿತ್ತು. ಆದರೆ, ಅದೇರೀತಿಯಲ್ಲಿ ಸೋಂಕು ತಗುಲಿ ಸೂಕ್ತ ಚಿಕಿತ್ಸೆ ಪಡೆದು ಗುಣಮುಖವಾಗುವವರ ಸಂಖ್ಯೆಯಲ್ಲಿಯೂ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವುದು ಜನರಲ್ಲಿನ ಆತಂಕವನ್ನು ದೂರಮಾಡಿದೆ.
    ಜಿಲ್ಲೆಯಲ್ಲಿ ಆರಂಭದಲ್ಲಿ ಇಬ್ಬರು ಸೋಂಕಿತರು ಗುಣಮುಖರಾಗಿದ್ದರು. ಅದೇರೀತಿ ಬುಧವಾರ 7 ಜನ, ಗುರುವಾರ ಐವರು ಹಾಗೂ ಶುಕ್ರವಾರ 7 ಜನ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈ ವರೆಗೂ ಒಟ್ಟು 21 ಜನರು ಕಿಲ್ಲರ್ ಕೊರೊನಾದ ಸಾವಿನ ದವಡೆಯಿಂದ ಪಾರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
    ಶುಕ್ರವಾರ ಸಂಜೆ ಸೋಂಕಿನ ವಿರುದ್ದ ಹೋರಾಡಿ ಸಂಪೂರ್ಣವಾಗಿ ಗುಣಮುಖರಾದ ಏಳು ಜನರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೇರಿದಂತೆ ಹಿರಿಯ ಅಧಿಕಾರಿಗಳು, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು ಚಪ್ಪಾಳೆ ತಟ್ಟುವ ಮೂಲಕ ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದರು.
     ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ,      ಇವತ್ತು ಒಟ್ಟು 7 ಜನರನ್ನು ಕೊರೊನಾದಿಂದ ಗುಣಮುಖರಾದವರನ್ನು ಬಿಡುಗಡೆ ಮಾಡಲಾಗಿದೆ. ಈ 7 ಜನರು ಪಿ-533, 581, 660, 661, 665, 666 ಹಾಗೂ 696 ಇಬ್ಬರು ಪುರುಷರು ಹಾಗೂ 5 ಜನ ಹೆಣ್ಣು ಮಕ್ಕಳನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು ಹಳೆಯ 14 ಜನರು ಹಾಗೂ ಇಂದು 7 ಜನರು ಸೇರಿ ಒಟ್ಟು 21 ಜನರನ್ನು ಬಿಡುಗಡೆ ಮಾಡಲಾಗಿದೆ. ಒಟ್ಟು 118 ರಲ್ಲಿ 93 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ ಎಂದರು.
ಆದಷ್ಟು ಬೇಗ ಎಲ್ಲರೂ ಗುಣಮುಖರಾಗುವ ವಿಶ್ವಾಸ ಇದೆ.
 
     ಅವರನ್ನು ಕೂಡ ಪ್ರೋಟೊಕಾಲ್ ಪ್ರಕಾರ ಒಳ್ಳೆಯ ಚಿಕಿತ್ಸೆ ನೀಡಿ, ಅವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಆದಷ್ಟು ಬೇಗ ಗುಣಮುಖರಾನ್ನಾಗಿಸುವ ಪ್ರಯತ್ನ ಮಾಡಲಾಗುತ್ತಿದೆ. 14 ದಿನ ಮುಗಿದವರದ್ದು ಸ್ಯಾಂಪಲ್ ಮರು ಸಂಗ್ರಹಿಸಿ ಕಳುಹಿಸಿದ್ದು, ಒಂದಿಷ್ಟು ಜನರ ವರದಿ ಬಂದಿದೆ. ಕೆಲವರನ್ನು ನಾಳೆಗೆ ಕಳುಹಿಸುವ ಕ್ರಮ ಕೈಗೊಳ್ಳಲಾಗುವುದು ಎಂದರು.
    ಯಾರೊಬ್ಬರೂ ಭಯ ಪಡಬೇಕಿಲ್ಲ. ಪ್ರತಿಯೊಬ್ಬರು ಎಸ್‍ಎಂಎಸ್ ಎನ್ನುವ ಮಾರ್ಗ ಅನುಸರಿಸುವುದರೊಂದಿಗೆ ನೆನಪಿಟ್ಟುಕೊಳ್ಳಬೇಕು. ಸ್ಯಾನಿಟೈಸರ್, ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಂಡು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಜೊತೆಗೆ ಕಂಟೈನ್‍ಮೆಂಟ್ ಜೋನ್ ಒಳಗೆ ಹೋಗುವವರು ಎಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಿದರು.
    ಈ ಸಂದರ್ಭದಲ್ಲಿ ಜಿಪಂ ಸಿಇಓ ಪದ್ಮಾ ಬಸವಂತಪ್ಪ, ಎಸಿ ಮಮತಾ ಹೊಸಗೌಡರ್, ಕೋವಿಡ್ ನೋಡಲ್ ಅಧಿಕಾರಿ ಪ್ರಮೋದ ನಾಯಕ್, ಮಹಾನಗರಪಾಲಿಕೆ ಆಯುಕ್ತರಾದ ವಿಶ್ವನಾಥ್ ಮುದಜ್ಜಿ, ಎಎಸ್‍ಪಿ ರಾಜೀವ್, ಡಿಎಚ್‍ಒ ಡಾ.ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರಚಿತ್ಸಕ ಸುಭಾಷಚಂದ್ರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link