ಭದ್ರಾವತಿಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ದಾಳಿ;7 ಲಕ್ಷ ವಶ

ಬೆಂಗಳೂರು:

      ಮತದಾನ ದಿನ ಸಮೀಪಿಸುತ್ತಿದ್ದಂತೆ ಜಿಲ್ಲೆಯಲ್ಲಿ ಪ್ರಚಾರ ಅಬ್ಬರ ಜೋರಾಗಿದೆ. ಇದರ ಜೊತೆಗೆ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ.

       ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಕೊಡ್ಲಿಗೇರಿ ಬಳಿ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ದಾಳಿ ನಡೆಸಿದ್ದಾರೆ.
ದಾಳಿ ವೇಳೆ ಅಧಿಕಾರಿಗಳು 7 ಲಕ್ಷ ರೂ. ಹಣ ವಶಪಡಿಸಿಕೊಂಡಿದ್ದಾರೆ.ರಾಮಚಂದ್ರ ನೇತೃತ್ವದ ಫ್ಲೈಯಿಂಗ್ ಸ್ಕ್ವಾಡ್ ತಂಡ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದಾರೆ. ಈ ಸಂದರ್ಭ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

        ಶಿವಮೊಗ್ಗ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಪಾದ ಯಾತ್ರೆ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಮತಯಾಚಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link