ಬೆಂಗಳೂರು
ರೈತರಿಗೆ ಸದ್ಯ ನೀಡುತ್ತಿರುವ ಕೃಷಿ ಸಾಲದ ಪ್ರಮಾಣ ಹೆಚ್ಚಿಸಿ ಭೂಮಿಯ ಶೇ.75ರಷ್ಟು ಸಾಲ ಮಂಜೂರು ಮಾಡಲು ತೀರ್ಮಾನ ಕೈಗೊಂಡು ಬಜೆಟ್ ನಲ್ಲಿ ಘೋಷಿಸಬೇಕು ಎಂದು ರೈತ ಸಂಘಟನೆಗಳ ಪ್ರಮುಖರು ಮುಖ್ಯಮಂತ್ರಿಗಳಿಗೆ ಆಗ್ರಹಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಬಜೆಟ್ ಪೂರ್ವಭಾವಿ ಸಭೆಯಲ್ಲಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟ ರೈತರು, ಸಾಲ ಮನ್ನಾಗೆ ವಿಧಿಸಿರುವ ಷರತ್ತುಗಳನ್ನು ಕೈ ಬಿಟ್ಟು ಕೃಷಿ ಭೂಮಿಯ ಶೇ.75 ರಷ್ಟು ಸಾಲ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಮಳೆ ಇಲ್ಲದೆ ರೈತರು ಸಂಕಷ್ಟಕ್ಕೀಡಾಗಿದ್ದು, ಅಪಾರ ಪ್ರಮಾಣದ ಹಾನಿಗೊಳಗಾಗಿದ್ದಾರೆ. ಸರ್ಕಾರ ರಾಜ್ಯದ ರೈತರ ಹಿತ ಕಾಪಾಡಲು ರೈತರಿಗೆ ಕನಿಷ್ಟ ಆದಾಯ ಖಾತ್ರಿ ಭದ್ರತೆ ಯೋಜನೆ ಜಾರಿಗೆ ತರಬೇಕು. ಫಸಲ್ ಬಿಮಾ ಯೋಜನೆಯನ್ನು ಕಬ್ಬು ಹಾಗೂ ರೇಷ್ಮೆಗೂ ವಿಸ್ತರಿಸಬೇಕು. ರೈತರ ವಿರುದ್ಧ ಹೂಡಿರುವ ಎಲ್ಲಾ ಪೊಲೀಸ್ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು. ಸಕ್ಕರೆ ಕಾರ್ಖಾನೆ ಸಮಸ್ಯೆಗಳನ್ನು ಬಗೆ ಹರಿಸಬೇಕು ಎಂದು ಮುಖಂಡರು ಮನವಿ ಮಾಡಿದರು.ಸಭೆಯಲ್ಲಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್, ಕೃಷಿ ಸಚಿವ ಶಿವಶಂಕರರೆಡ್ಡಿ, ಬಂಡೆಪ್ಪ ಕಾಶೆಂಪೂರ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ