1ದಿನಕ್ಕೆ 75 ಸಾವಿರ ಪರೀಕ್ಷೆ ಮಾಡಲಾಗುತ್ತಿದೆ : ಡಾ.ಕೆ ಸುಧಾಕರ್

ಹೊಸಕೋಟೆ:

     ಇನ್ನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ದಿನಕ್ಕೆ 1 ಲಕ್ಷ ಕೋವಿಡ್‌ ಟೆಸ್ಟ್ ಗುರಿ ತಲುಪಲಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.‌ ಸುಧಾಕರ್ ಹೇಳಿದರು.ಹೊಸಕೋಟೆಯಲ್ಲಿರುವ ಎಂವಿಜೆ ಮೆಡಿಕಲ್ ಕಾಲೇಜು ಹಾಗೂ ರೀಸರ್ಚ್ ಹಾಸ್ಪಿಟಲ್‌ನಲ್ಲಿ ಶನಿವಾರ “ಕೋವಿಡ್‌ ಲ್ಯಾಬ್” ಉದ್ಘಾಟಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

     ಕೋವಿಡ್‌ ನಿಯಂತ್ರಣದಲ್ಲಿ ರಾಜ್ಯ ಸರಕಾರ ಬದ್ಧತೆ ಪ್ರದರ್ಶಿಸಿದೆ. ಕೇವಲ ಒಂದು ಲ್ಯಾಬ್‌ನಿಂದ ಪ್ರಾರಂಭವಾಗಿ ಕೇವಲ ಆರು ತಿಂಗಳಲ್ಲಿ 108 ಲ್ಯಾಬ್‌ಗಳನ್ನು ತೆರೆದಿದ್ದೇವೆ.‌ ಪ್ರಾರಂಭದಲ್ಲಿ ಸುಮಾರು 300 ಕೋವಿಡ್‌ ಟೆಸ್ಟ್‌ ಮಾಡಲಾಗುತ್ತಿತ್ತು. ಈಗ ದಿನಕ್ಕೆ 75 ಸಾವಿರ ಪರೀಕ್ಷೆ ಮಾಡಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ದಿನಕ್ಕೆ ಲಕ್ಷ ಕೋವಿಡ್‌ ಟೆಸ್ಟ್‌ ಗುರಿ ತಲುಪಲಿದ್ದೇವೆ ಎಂದು ವಿವರಿಸಿದರು.

     ವೈದ್ಯಕೀಯ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ‌ ಸಾಕಷ್ಟು ಬದಲಾವಣೆ ಅನಿವಾರ್ಯವಿದೆ. ನಮ್ಮಲ್ಲಿ 60 ವೈದ್ಯಕೀಯ ಕಾಲೇಜುಗಳಿವೆ.‌ ವರ್ಷಕ್ಕೆ 10 ಸಾವಿರ ವಿದ್ಯಾರ್ಥಿಗಳು ತೇರ್ಗಡೆಯಾಗುತ್ತಿದ್ದಾರೆ. ಕಾಲೇಜಿನ‌ ಸಂಖ್ಯೆ ಹೆಚ್ಚಿಸಿದರೆ ಸಾಲದು ಗುಣಮಟ್ಟದ ಶಿಕ್ಷಣ ಕೊಡಿಸುವುದು ಅನಿವಾರ್ಯ ಎಂದು ಸಚಿವರು ಹೇಳಿದರು.

     ನಾನು ಸಹ ಮೊದಲ ಪ್ರಯತ್ನದಲ್ಲಿ ಎಂಬಿಬಿಎಸ್‌ ಪ್ರವೇಶಕ್ಕೆ ಆಯ್ಕೆಯಾಗದೆ ಒಂದು ವರ್ಷ ತಡವಾಗಿ ವೈದ್ಯ ಶಿಕ್ಷಣಕ್ಕೆ ಸೇರಿಕೊಂಡಿದ್ದೆ ಎಂದು ಸಚಿವ ಡಾ ಕೆ ‌ಸುಧಾಕರ್ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ಸ್ಮರಿಸಿಕೊಂಡರು.

    ಆ ಒಂದು ವರ್ಷದಲ್ಲಿ ನಾನು ಕೃಷಿಯಲ್ಲಿ ತೊಡಗಿಸಿಕೊಳ್ಳುವ ಮೂಲಕ‌ ಸಮಯವನ್ನು ಸದುಪಯೋಗ ಮಾಡಿಕೊಂಡಿದ್ದೆ. ಇದರ ಜೊತೆಗೆ ಮುಂದಿನ ವರ್ಷದ ಪ್ರವೇಶ ಪರೀಕ್ಷೆಗೆ ಸಿದ್ಧತೆ ನಡೆಸಿ ಸಫಲನಾದೆ. ಮೊದಲ ಪ್ರಯತ್ನದಲ್ಲೇ ಪ್ರವೇಶಾತಿ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳು ಧೃತಿಗೆಡದೆ ಪ್ರಯತ್ನ ಮುಂದುವರಿಸಬೇಕು ಎಂದು ಸಚಿವ ಸುಧಾಕರ್‌ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap