ತುಮಕೂರು :
ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಇದರ ಬಗ್ಗೆ ಮಹಾನಗರ ಪಾಲಿಕೆ ಯಾವುದೇ ಕ್ರಮ ಕೈಗೊಳ್ಳದೆ ಇದ್ದುದ್ದರ ಪರಿಣಾಮ, ಇಂದು ಸುಮಾರು 8 ಮಕ್ಕಳು ನಾಯಿಯ ದಾಳಿಗೆ ಒಳಗಾಗಿರುವ ಘಟನೆ ಎದುರಿಸಬೇಕಾಗಿದೆ.
ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ, ಇದರ ಬಗ್ಗೆ ಪಾಲಿಕೆ ಸೂಕ್ತ ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಾಕಷ್ಟು ಬಾರಿ ಅರ್ಜಿಗಳನ್ನು ನೀಡಲಾಗಿದೆ. ಅದ್ಯಾಕೋ ಇದಕ್ಕೆ ಪಾಲಿಕೆ ತಲೆ ಕೆಡಿಸಿಕೊಂಡಂತೆ ಕಾಣುತ್ತಿಲ್ಲ, ಇದರ ಪರಿಣಾಮ ಇಂದು 8 ಜನ ಮಕ್ಕಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿವೆ.
ಸದಾಶಿವನಗರದಲ್ಲಿ 8 ಜನ ಮಕ್ಕಳಿಗೆ ನಾಯಿ ಕಚ್ಚಿದೆ. ಇದು ಕೇಲವ ಯಾವುದೋ ಒಂದು ನಗರದ ಸಮಸ್ಯೆಯಲ್ಲ ಹಲವು ನಗರಗಳದ್ದೂ ಇದೆ ಕಥೆ. ಆದರೆ ಪಾಲಿಕೆ ಅಧಿಕಾರಿಗಳಾಗಲಿ, ಜಿಲ್ಲಾಡಳಿತವಾಗಲಿ ಇದರ ವಿಚಾರವಾಗಿ ಮೌನ ವಹಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಚಿಕ್ಕ ಮಕ್ಕಳು, ವಯಸ್ಸಾದವರು ಒಬ್ಬೊಬ್ಬರೆ ಓಡಾಡಲು ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗುಂಪು ಗುಂಪಾಗಿ ಬರುವ ನಾಯಿಗಳು ಏಕಾ ಏಕಿ ದಾಳಿ ಮಾಡುತ್ತಿವೆ, ಇದರಿಂದಾಗಿ ನಗರದ ಜನರು ರೋಸಿ ಹೋಗಿದ್ದಾರೆ. ತಕ್ಷಣವೇ ಕ್ರಮ ಕೈಗೊಳ್ಳದೆ ಇದ್ದರೆ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.ಸಂಬಂಧಪಟ್ಟ ಅಧಿಕಾರಿಗಳು ಈ ಬೀದಿ ನಾಯಿಗಳ ಹಾವಳಿಗೆ ಸೂಕ್ತ ಕ್ರಮ ತೆಗೆದುಕೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಿದೆ. ಇದು ಸಾದ್ಯವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
