ತಂಬಾಕು ನಿಯಂತ್ರಣ ತಂಡದಿಂದ ದಾಳಿ : 87 ಪ್ರಕರಣ ದಾಖಲು

ದಾವಣಗೆರೆ
     ದಾವಣಗೆರೆ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಟಾನ ಜಿಲ್ಲೆ ಎಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕು ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಆ.21 ರಂದು ನಗರದ ವಿವಿಧೆಡೆ ಜಿಲ್ಲಾ  ತಂಬಾಕು ನಿಯಂತ್ರಣ ತನಿಖಾ ದಳದಿಂದ ತಂಬಾಕು ದಾಳಿ ನಡೆಸಲಾಯಿತು.
    ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ ಕಾರ್ಮಿಕರ ಯೋಜನೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದೊಂದಿಗೆ ಈ ವಿಶೇಷ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು.
    ಅಪರ ಜಿಲ್ಲಾಧಿಕಾರಿ ಪದ್ಮಾ ಬಸವಂತಪ್ಪ ಇವರ ನೇತೃತ್ವದಲ್ಲಿ ತಂಡ ರಚಿಸಿಕೊಂಡು ಸಿಗರೇಟು ಮತ್ತು ಇತರ ತಂಬಾಕು ಉತ್ಪನ್ನಗಳ ಅಧಿನಿಯಮ-2003 ಸೆಕ್ಷನ್ 4 ರಡಿ 48 ಹಾಗೂ ಸೆಕ್ಷನ್ 6ಎ ಅಡಿಯಲ್ಲಿ 33 ಪ್ರಕರಣ, ಸೆಕ್ಷನ್ 6ಬಿ ಅಡಿಯಲ್ಲಿ 6 ಪ್ರಕರಣ ಸೇರಿದಂತೆ ಒಟ್ಟು 87 ಪ್ರಕರಣಗಳನ್ನು ದಾಖಲಿಸಿ, ರೂ. 8850/- ಗಳನ್ನು ದಂಡದ ರೂಪದಲ್ಲಿ ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು.  
    ತಂಡವು ಎವಿಕೆ ರಸ್ತೆ, ಮಾಮಾಸ್ ಜಾಯಿಂಟ್ ರೋಡ್ ಮತ್ತು ಬಾಲಕರ ವಸತಿನಿಲಯದ ರಸ್ತೆ ಹಾಗೂ ಸುತ್ತಮುತ್ತಲಿನ ಹೊಟೇಲ್, ಬಾರ್ & ರೆಸ್ಟೋರೆಂಟ್, ಪಾನ್‍ಶಾಪ್, ಬಸ್ ನಿಲ್ದಾಣ ಇತ್ಯಾದಿ ಪ್ರಮುಖ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರುವವರು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳನ್ನು ಸೇವಿಸುವವವರಿಗೆ ಸ್ಥಳದಲ್ಲಿಯೇ ದಂಡ ಹಾಕುವ ಮೂಲಕ ಜಾಗೃತಿ ಮೂಡಿಸಿದರು. ಹಾಗೂ ಸಾರ್ವಜನಿಕ ಸ್ಥಳದಲ್ಲಿರುವ ಅಂಗಡಿ ಮಾಲೀಕರುಗಳು ಧೂಮಪಾನ ನಿಷೇಧÀದ ಬಗ್ಗೆ ಪ್ರದರ್ಶಿಸಬೇಕಾದ ಫಲಕಗಳನ್ನು ಕಟ್ಟುನಿಟ್ಟಾಗಿ ಅಳವಡಿಸಲು ತಾಕೀತು ಮಾಡಿದರು. 
   ಕೋಟ್ಪಾ ಕಾಯಿದೆಯ ಸೆಕ್ಷನ್ 6ಎ ಪ್ರಕಾರ 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳನ್ನು ಮಾರುವುದು ಹಾಗೂ ಮಕ್ಕಳಿಂದ ತಂಬಾಕು ಉತ್ಪನ್ನಗಳ ಮಾರಾಟ ಮಾಡಿಸುವುದನ್ನು ನಿಷೇಧಿಸಿರುವುದರ ಬಗ್ಗೆ, ಹಾಗೂ ಶಾಲಾ ಕಾಲೇಜು, ಶಿಕ್ಷಣ ಸಂಸ್ಥೆಗಳ 100 ಯಾರ್ಡ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಿರುವುದು, ಸೆಕ್ಷನ್ 4 ಸಾರ್ವಜನಿಕ ಪ್ರದೇಶದಲ್ಲಿ ಧೂಮಪಾನ ನಿಷೇಧ ಮತ್ತು ತಂಬಾಕು ಉತ್ಪನ್ನಗಳ ಪ್ಯಾಕ್‍ಗಳ ಮೇಲೆ ಎಚ್ಚರಿಕೆ ಚಿನ್ಹೆ ಇಲ್ಲದೆ ಮಾರಾಟ ಮಾಡುವುದನ್ನು ನಿಷೇಧÀ ಇರುವ ಬಗ್ಗೆ ತಂಡದ ಸದಸ್ಯರು ಮಾಹಿತಿ ನೀಡಿದರು.
     ತಂಬಾಕು ನಿಯಂತ್ರಣ ತನಿಖಾ ತಂಡದಲ್ಲಿ ಆಹಾರ ಸುರಕ್ಷತಾಧಿಕಾರಿ ಕೊಟ್ರೇಶ್.ಹೆಚ್, ರಾಜ್ಯ ತಂಬಾಕು ನಿಯಂತ್ರಣ ಕೋಶದ ವಿಭಾಗೀಯ ಸಂಯೋಜಕರಾದ  ಮಹಾಂತೇಶ್ ಉಳ್ಳಾಗಡ್ಡಿ, ಜಿಲ್ಲಾ ಸಲಹೆಗಾರರದ ಸತೀಶ್ ಕಲಿಹಾಳ, ಟಿಪಿಇಒ ಶಿಕ್ಷಣ ಇಲಾಖೆಯ ವೀರಪ್ಪ, ಸಮಾಜ ಕಾರ್ಯಕರ್ತ ದೇವರಾಜ್.ಪಿ, ಮಹಾನಗರಪಾಲಿಕೆಯ ಆರೋಗ್ಯ ನಿರೀಕ್ಷಕರಾದ ಅಚಿಜನಪ್ಪ ನಿಖಿಲ್, ಬೆಂಗಳೂರಿನ ಮಾಯಾ ಸಂಸ್ಥೆಯ ಜೀತನ ಚಂದ್ರ, ಬಡಾವಣೆ ಪೊಲೀಸ್ ಠಾಣೆಯ ಹನುಮಂತಪ್ಪ.ಟಿ, ಶಶಿಧರ್ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link