ಸಾಲ ಮನ್ನಾ ಮಾಡಲು 876 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ : ವಜೂಭಾಯಿ ವಾಲಾ

ಬೆಂಗಳೂರು

      ರೈತರ ಕಲ್ಯಾಣ, ಅವರಿಗೆ ಉತ್ತಮ ಬದುಕು ಕಲ್ಪಿಸಿಕೊಡುವುದು ಸರ್ಕಾರದ ಆದ್ಯತೆಯಾಗಿದ್ದು ಸಾಲ ಮನ್ನಾ ಯೋಜನೆಯಡಿ 1.1 ಲಕ್ಷ ಸಹಕಾರಿ ಬ್ಯಾಂಕ್‍ಗಳು ಮತ್ತು 58 ಸಾವಿರ ವಾಣಿಜ್ಯ ಬ್ಯಾಂಕ್‍ಗಳ ಸಾಲ ಮನ್ನಾ ಮಾಡಲು 876 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ರಾಜ್ಯಪಾಲ ವಜೂಭಾಯಿ ವಾಲಾ ಪ್ರತಿಪಾದಿಸಿದ್ದಾರೆ.

      70ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಶಾ ಪೆರೇಡ್‍ನಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್‍ಗಳಲ್ಲಿ ಬಾಕಿ ಇರುವ ಬೆಳೆ ಸಾಲಕ್ಕೆ ಸಂಬಂಧಪಟ್ಟಂತೆ ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂಪಾಯಿವರೆಗೆ ಹಾಗೂ ವಾಣಿಜ್ಯ ಬ್ಯಾಂಕ್‍ಗಳಲ್ಲಿ ಅವಧಿ ಮೀರಿದ ಬೆಳೆ ಸಾಲಗಳಿಗೆ ಸಂಬಂಧಪಟ್ಟಂತೆ ಪ್ರತಿ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಬೆಳೆ ಸಾಲ ಮನ್ನಾ ಮಾಡಲು ನೂತನ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದರು.

      ಮುಂದಿನ ಐದು ವರ್ಷಗಳಲ್ಲಿ ಬಡವರಿಗೆ 20 ಲಕ್ಷ ಮನೆಗಳ ನಿರ್ಮಾಣ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಹಸಿವು ಮುಕ್ತ ರಾಜ್ಯವನ್ನಾಗಿ ಮಾಡಲು, ರಾಜ್ಯಾದ್ಯಂತ ಅನ್ನಭಾಗ್ಯ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದ್ದಾರೆ.

      ಬಂಡವಾಳ ಹೂಡಿಕೆ ಮತ್ತು ಆಕರ್ಷಣೆ ಮಾಡುವಲ್ಲಿ ದೇಶದಲ್ಲಿ ಕರ್ನಾಟಕವೇ ಮೊದಲು ಎಂಬುದನ್ನು ಪ್ರಸ್ತಾಪಿಸಲು ಸಂತೋಷವಾಗುತ್ತದೆ. ಕೈಗಾರಿಕಾ ನೀತಿ 2014-19 ರ ಅಡಿ 10.27 ಲಕ್ಷ ಜನರಿಗೆ ಉದ್ಯೋಗಾವಕಾಶ ದೊರಕಿಸಿಕೊಡುವ, 100.49 ಲಕ್ಷ ಕೋಟಿ ರೂ ಬಂಡವಾಳ ಹೂಡಿಕೆ ಮಾಡುವ 1,958 ಕೈಗಾರಿಕಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

      ಚೀನಾದ ಸ್ಪರ್ಧೆಯನ್ನು ಯಶಸ್ವಿಯಾಗಿ ಹಿಮ್ಮೆಟ್ಟಿಸಲು `ಕಾಂಪಿಟ್ ವಿತ್ ಚೈನಾ’ ಎಂಬ ಯೋಜನೆಯನ್ನು 9 ಜಿಲ್ಲೆಗಳಲ್ಲಿ ಜಾರಿಗೆ ತರಲಾಗುತ್ತಿದೆ. ಇದಕ್ಕಾಗಿ ಕೈಗಾರಿಕಾ ಕ್ಲಸ್ಟರ್‍ಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಪ್ರತಿಯೊಂದು ಕ್ಲಸ್ಟರ್‍ನಲ್ಲಿ 1 ಲಕ್ಷ ಉದ್ಯೋಗ ಸೃಷ್ಟಿಗೆ, ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯಪಾಲರು ತಮ್ಮ ಭಾಷಣದಲ್ಲಿ ತಿಳಿದಿದ್ದಾರೆ.

        ಯುವಕ ಯುವತಿಯರಿಗೆ ಉದ್ಯೋಗ ಒದಗಿಸಲು ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳ ಮೂಲಕ ತರಬೇತಿ ನೀಡಲಾಗುತ್ತಿದೆ. ನಿರುದ್ಯೋಗಿ ಯುವಕ ಯುವತಿಯರು ತರಬೇತಿ ನೀಡುವವರು ಮತ್ತು ತರಬೇತಿ ಕೇಂದ್ರಗಳನ್ನು ನೋಂದಣಿ ಮಾಡಿಸಲು ಅನುಕೂಲವಾಗುವಂತೆ ಕೌಶಲ್ಯಕರ ಎಂಬ ಮೊಬೈಲ್ ಆ?ಯಪ್ ಆರಂಭಿಸಲಾಗಿದೆ. ಇದುವರೆಗೆ 8,94,001 ಅಭ್ಯರ್ಥಿಗಳು 3,922 ತರಬೇತಿ ಕೇಂದ್ರಗಳನ್ನು ಈ ಆಯಪ್‍ನಡಿ ನೋಂದಾಯಿಸಲಾಗಿದೆ.

       2018-19ನೇ ಸಾಲಿನಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಸಂಯೋಜಿಸುವುದರ ಮೂಲಕ 1 ರಿಂದ 12ನೇ ತರಗತಿವರೆಗೆ 176 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸುವುದಕ್ಕೆ ಅನುಮೋದನೆ ನೀಡಲಾಗಿದೆ. ವಿಶ್ವಾಸಕಿರಣ ಕಾರ್ಯಕ್ರಮದಡಿಯಲ್ಲಿ ರಾಜ್ಯಾದ್ಯಂತ 549 ಕೇಂದ್ರಗಳಲ್ಲಿ 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಇಂಗ್ಲಿಷ್, ಗಣಿತ, ವಿಜ್ಞಾನ ವಿಷಯಗಳಲ್ಲಿ 25 ದಿನಗಳ ಕಾಲ ವಿಶೇಷ ಬೋಧನಾ ತರಗತಿ ಪ್ರಾರಂಭಿಸಲಾಗಿದೆ ಎಂದು ತಮ್ಮ ಭಾಷಣದಲ್ಲಿ ಮಾಹಿತಿ ನೀಡಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap