ಬೆಂಗಳೂರು:
ತೀವ್ರ ಕುತೂಹಲ ಕೆರಳಿಸಿದ್ದ ಉಪ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರ ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬೆಂಬಲಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಶರತ್ ಬಚ್ಚೇಗೌಡ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ 11,466 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಬಚ್ಚೇಗೌಡ ಬೆಂಬಲಿಗ ರಿಯಾಜ್ ಬೇಗ್ [50] ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಶರತ್ ಬಚ್ಚೇಗೌಡ ಗೆಲುವು ಖಚಿತವಾಗುತ್ತಿದ್ದಂತೆ ಕಟ್ಟಿಗೇನಹಳ್ಳಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದ ರಿಯಾಜ್ ಬೇಗ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಚಿದ್ದಾರೆ ಎಂದು ವರದಿಯಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








