ಬೆಂಗಳೂರು :
ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರದ ನಡುವೆ ಭಿನ್ನಮತ ಭುಗಿಲೇಳುತ್ತಲಿದೆ. ನಾಯಕರು ಬಹಿರಂಗವಾಗಿಯೇ ತಮ್ಮ ಅಸಮಾಧಾನವನ್ನು ಹೊರಹಾಕುತ್ತಿದ್ದಾರೆ.
ಸಚಿವ ಸ್ಥಾನ ವಂಚಿತ ಶಾಸಕ ಎಚ್.ಎಮ್ ರೇವಣ್ಣ ಜೆಡಿಎಸ್ ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ಅವರ ಧೈರ್ಯವನ್ನು ನೋಡಿ ಪಕ್ಷದಲ್ಲಿ ಈಗ ಎಲ್ಲರೂ ಮಾತನಾಡಲು ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಪಕ್ಷದಲ್ಲಿ ಈ ರೀತಿಯಾದ ವಾತಾವರಣ ಇಲ್ಲ ಆದರೆ ಹೈಕಮಾಂಡ್ ಅನುಮತಿ ಇಲ್ಲದೇ ನಾವು ಏನನ್ನು ಮಾತನಾಡಲಾಗುವುದಿಲ್ಲ ಎಂದಿದ್ದಾರೆ.
ಇನ್ನು ಕೆಲ ನಾಯಕರು ಹೇಳಿರುವಂತೆ ಎಚ್.ಡಿ ರೇವಣ್ಣ ಮೂಗು ತುರಿಸುತ್ತಾರೆ. ಇದು ಸರಿಯಲ್ಲ. ತೀರ್ಮಾನ ಆಗಿರುವ ವಿಚಾರಗಳಿಗೆ ಅಡ್ಡಗಾಲು ಹಾಕುವುದು ಎಷ್ಟು ಸರಿ ನಿಗಮ ಮಂಡಳಿ ನೇಮಕಾತಿ ವಿಚಾರದ ಸಂಬಂಧ ಪ್ರಶ್ನೆ ಮಾಡಿದ್ದಾರೆ.
ಮೈತ್ರಿ ಪಕ್ಷದ ನಾಯಕರು ಒಟ್ಟಾಗಿ ಕುಳಿತೇ ನಿಗಮ ಮಂಡಳಿ ಪಟ್ಟಿ ಸಿದ್ಧಮಾಡಲಾಗಿತ್ತು. ಎಚ್.ಡಿ ರೇವಣ್ಣ ಏನು ಸೂಪರ್ ಸಿಎಂ ಅಲ್ಲ ಎಂದು ಎಚ್.ಎಂ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.
ಪ್ರತಿಷ್ಟಿತ ನಿಗಮ ಮಂಡಳಿ ನೇಮಕಾತಿ ವಿಚಾರವಾಗಿ ಕೆ.ಸಿ ವೇಣುಗೋಪಾಲ್ ಜೊತೆ ಚರ್ಚೆ ನಡೆಸಿ, ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಸುವಂತೆ ಒತ್ತಾಯಿಸುತ್ತೇವೆ ಎಂದು ತಿಳಿಸಿದ್ದಾರೆ.
ಸದ್ಯ ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. ಆದರೆ ಜೆಡಿಎಸ್ ಮೈತ್ರಿ ಧರ್ಮ ಪಾಲಿಸುತ್ತಿಲ್ಲ. ಕೇವಲ ಕಾಂಗ್ರೆಸ್ ಪಕ್ಷ ಮೈತ್ರಿ ಧರ್ಮ ಪಾಲನೆ ಮಾಡುತ್ತಿದೆ. ಬಿಜೆಪಿಯನ್ನು ಅಧಿಕಾರ ದೂರ ಇಡಬೇಕು ಎನ್ನುವ ಒಂದೇ ಕಾರಣಕ್ಕೆ ಕಾಂಗ್ರೆಸ್ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ.ಸಮಸ್ಯೆಗಳನ್ನು ಪರಿಹಾರ ಮಾಡಲು ಪರಸ್ಪರ ಸಹಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ