ಬೆಂಗಳೂರು:
ಅಭಿವೃದ್ಧಿ ರಾಜಕಾರಣಕ್ಕೆ ಜನರು ಮನ್ನಣೆ ನೀಡುತ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಲಬುರಗಿ ಮತದಾರರು ಎಂದಿನಂತೆ ಈ ಬಾರಿಯೂ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ತತ್ವ ಸಿದ್ದಾಂತಗಳ ಆಧಾರದ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಕಳೆದ 50 ವರ್ಷಗಳ ಅವಧಿಯಲ್ಲಿ ಈ ಭಾಗದ ಅಭಿವೃದ್ಧಿಗೆ ಶ್ರಮಿಸಿದ್ದೇನೆ, ಕೇಂದ್ರೀಯ ವಿಶ್ವವಿದ್ಯಾಲಯ, ಇಎಸ್‍ಐ ಆಸ್ಪತ್ರೆ, ದಂತ ವೈದ್ಯಕೀಯ ಕಾಲೇಜು, ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಿದ್ದು, ಅಭಿವೃದ್ಧಿ ಕೆಲಸ ಕಾರ್ಯಗಳು ಗೆಲುವಿಗೆ ಸಹಕಾರಿಯಾಗಲಿದೆ ಎಂಬ ಆಶಯವನ್ನು ಮಲ್ಲಿಕಾರ್ಜುನ ಖರ್ಗೆ ವ್ಯಕ್ತಪಡಿಸಿದರು.