ಮಧುಗಿರಿ

ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಜಯನಗರ ಗ್ರಾಮದಲ್ಲಿನ ರೈತ ರಾಮಕೃಷ್ಣಪ್ಪ ಅವರ ತೋಟಕ್ಕೆ ಇತ್ತೀಚೆಗೆ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂ ಬೆಲೆ ಬಾಳುವ ಬೆಳೆ ನಷ್ಟವಾಗಿದ್ದು, ಶಾಸಕ ಎಂ.ವಿ.ವೀರಭದ್ರಯ್ಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಬರದಿಂದ ತತ್ತರಿಸುತ್ತಿರುವ ರೈತರಿಗೆ ಇಂತಹ ದುರ್ಘಟನೆ ಎಂದಿಗೂ ಎದುರಾಗಬಾರದು. ಅಧಿಕಾರಿಗಳು ಸಂಕಷ್ಟದಲ್ಲಿ ಸಿಲುಕಿದ ರೈತನಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಜರೂರಾಗಿ ತಲುಪಿಸುವಂತೆ ಸೂಚಿಸಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಕೊಡಿಸಲು ಪ್ರಯತ್ನಿಸುವುದಾಗಿ ತಿಳಿಸಿದರು ಹಾಗೂ ಬೇಸಿಗೆ ಪ್ರಾರಂಭವಾಗಿದ್ದು, ಆಕಸ್ಮಿಕ ಬೆಂಕಿ ತಗುಲದಂತೆ ರೈತರು ಕೂಡ ಜಾಗೃತರಾಗಿರಬೇಕು ಎಂದು ತಿಳಿಸಿದರು.
ತಹಶೀಲ್ದಾರ್ ಡಾ.ಜಿ.ವಿಶ್ವನಾಥ್, ಸಹಾಯಕ ಕೃಷಿ ನಿರ್ದೇಶಕ ಹನುಮಂತರಾಯಪ್ಪ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ವಿಶ್ವನಾಥ್ ಗೌಡ, ಸಹಾಯಕ ತೋಟಗಾರಿಕೆ ಅಧಿಕಾರಿ ಶರತ್ ಕುಮಾರ್, ಕಂದಾಯ ನಿರೀಕ್ಷರ ಚನ್ನವೀರಪ್ಪ, ಕೃಷಿ ಅಧಿಕಾರಿ ಚೇತನ, ಮುಖಂಡ ಬಾವಿಮನೆ ಕಾಂತರಾಜು ಹಾಗೂ ಮುಂತಾದವರು ಇದ್ದರು.
