ಬಟ್ಟೆ ಅಂಗಡಿಗೆ ಆಕಸ್ಮಿಕ ಬೆಂಕಿ : ಲಕ್ಷಾಂತರ ರೂ ನಷ್ಟ…!!

ಬೆಂಗಳೂರು

        ಬಟ್ಟೆ ಅಂಗಡಿಯೊಂದಕ್ಕೆ ಬೆಂಕಿಬಿದ್ದು, ಲಕ್ಷಾಂತರ ರೂ. ಗಳ ನಷ್ಟ ಸಂಭವಿಸಿರುವ ದುರ್ಘಟನೆ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ನಡೆದಿದೆ.

       ಕಮರ್ಷಿಯಲ್ ಸ್ಟ್ರೀಟ್‍ನ ಇಬ್ರಾಹಿಂ ಸ್ಟ್ರೀಟ್‍ನಲ್ಲಿನ ಡೈಮಂಡ್ ಪ್ಲಾಜಾದಲ್ಲಿರುವ ಬಟ್ಟೆ ಅಂಗಡಿಗೆ ರಾತ್ರಿ 12ರ ವೇಳೆ ವಿದ್ಯುತ್ ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗುಲಿದೆ.ಬೆಂಕಿಯು ಕ್ಷಣಾರ್ಧದಲ್ಲಿ ಇಡೀ ಅಂಗಡಿ ಆವರಿಸಿ ಬೆಂಕಿ ಹೊರಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಮಾಹಿತಿ ನೀಡಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಎರಡು ವಾಹನಗಳು ಬೆಂಕಿ ನಂದಿಸಿವೆ.

      ಅಂಗಡಿಯಲ್ಲಿ ಯಾರೂ ಇಲ್ಲದಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೆಂಕಿಯಿಂದ ಸುಮಾರು 4 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap