ಮಧುಗಿರಿ
ತಾಲ್ಲೂಕಿನ ಮಿಡಿಗೇಶಿ ಗ್ರಾಮ ಪಂಚಾಯಿತಿಗೆ ಸೇರಿದ ಲಕ್ಲೀಹಟ್ಟಿ ಗ್ರಾಮದ ಮಲ್ಲಮ್ಮ ಎನ್ನುವವರಿಗೆ ಸೇರಿದ ಹುಲ್ಲಿನ ಬಣವೆಗೆ ಡಿ. 31 ರಂದು ರಾತ್ರಿ ಆಕಸ್ಮಿಕ ಬೆಂಕಿಬಿದ್ದ ಪರಿಣಾಮ ಸುಮಾರು ನಲವತ್ತು ಸಾವಿರ ರೂ. ಬೆಲೆ ಬಾಳುವ ಮೇವು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸುದ್ದಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದ್ದು, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
