ಜನವರಿ ಮೊದಲವಾರದೊಳಗಾಗಿ ಶೇ.100 ರಷ್ಟು ಗುರಿ ಸಾಧಿಸಿ

ಹಾವೇರಿ

          ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳಡಿಯಲ್ಲಿ ವಿವಿಧ ಇಲಾಖೆಗಳು ಹಾಗೂ ನಿಗಮಗಳು ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸುವ ಮೂಲಕ ಜನವರಿ ಮೊದಲವಾರದೊಳಗಾಗಿ ಶೇ.100ರಷ್ಟು ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

         ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಕರ್ನಾಟಕ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲ ಹಂಚಿಕೆ ಮತ್ತು ಬಳಕೆ) ಅಧಿನಿಯಮ-2013ರನ್ವಯ ಜಿಲ್ಲೆಯಲ್ಲಿ ಅನುಸೂಚಿತ ಜಾತಿಗಳ ಉಪ ಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಗಳಡಿಯಲ್ಲಿ ವಿವಿಧ ಅಭಿವೃದ್ಧಿ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಕಾರ್ಯಕ್ರಮಗಳ ಪ್ರಸಕ್ತ ಸಾಲಿನ ವವಂಬರ್ -2018ರವರೆಗೆ ಸಾಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

       ಈಗಾಗಲೇ ಕೆಲವು ಇಲಾಖೆಗಳು ಶೇ.100 ರಷ್ಟು ಗುರಿ ಸಾಧಿಸಿವೆ. ನವಂಬರ ಮಾಹೆಯಲ್ಲಿ ಅನುದಾನ ಬಿಡುಗಡೆಯಾದ ಹಿನ್ನೆಲೆಯಲ್ಲಿ ಕೆಲವು ಇಲಾಖೆಗಳು ಗುರಿ ಸಾಧಿಸಲು ವಿಳಂಬವಾಗಿರುವುದಾಗಿ ತಿಸಿಳಿದ್ದು, ಕೂಡಲೇ ಸಮರೋಪಾದಿಯಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಮೂಲಕ ಅರ್ಹ ಫಲಾನುಭವಿಗಳ ಆಯ್ಕೆ ಮಾಡುವ ಮೂಲಕ ಯೋಜನೆಗಳ ಸದುಪಯೋಗಪವಾಗಲಿ. ಫಲಾನುಭವಿಗಳಿಗೆ ಸಾಮಗ್ರಿ ವಿತರಣೆಯಲ್ಲಿ ಗುಣಮಟ್ಟದ ಕಾಯ್ದುಕೊಳ್ಳಬೇಕು. ತರಾತುರಿಯಲ್ಲಿ ಕಾರ್ಯಕ್ರಮ ಅನುಷ್ಠಾನಗೊಳಿಸುವ ನೆಪದಲ್ಲಿ ಕಳಪೆ ಸಾಮಗ್ರಿಗಳನ್ನು ವಿತರಣೆ ಮಾಡಕೂಡದು. ಗುಣಮಟ್ಟದ ವಸ್ತುಗಳ ವಿತರಣೆ ಆದ್ಯತೆ ನೀಡಬೇಕು. ಈ ಯೋಜನೆಗಳಡಿ ಬಿಡುಗಡೆಯಾದ ಅನುದಾನ ಯಾವುದೇ ಕಾರಣಕ್ಕೂ ಮರಳಿ ಹೋಗದಂತೆ ಕಾರ್ಯಕ್ರಮಗಳ ಕ್ರಿಯಾಯೋಜನೆ ರೂಪಿಸಿ. ಒಂದು ವೇಳೆ ಅನುದಾನ ಮರಳಿ ಸರ್ಕಾರಕ್ಕೆ ಹೋದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

          ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ಗ್ಯಾಸ್ ಸ್ಟೌವ್ ವಿತರಣೆ ಮಾಡಲಾಗುತ್ತಿದೆ. ಸೌಲಭ್ಯ ಪಡೆದ ಫಲಾನುಭವಿಗಳಿಗೆ ಮತ್ತೆ ಗ್ಯಾಸ್ ವಿತರಣೆಯಾಗದಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ಸೌಲಭ್ಯ ವಂಚಿತ ಫಲಾನುಭವಿಗಳಿಗೆ ವಿತರಿಸಬೇಕು. ಶಿಕ್ಷಣ ಇಲಾಖೆಯಿಂದ ಹಾಗೂ ಕೆಲವು ವಿದ್ಯಾರ್ಥಿ ನಿಲಯಗಳಲ್ಲಿಯೂ ಸೈಕಲ್ ವಿತರಣೆ ಮಾಡಲಾಗುತ್ತಿದೆ. ಕಾರಣ ಶಿಕ್ಷಣ ಇಲಾಖೆ ಅಧಿಕಾರಿಗಳು ಸಂಬಂಧಪಟ್ಟ ವಿದ್ಯಾರ್ಥಿನಿಲಯಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಬೇಕು ಎಂದು ಹೇಳಿದರು.

       ಜಿಲ್ಲೆಯಲ್ಲಿ 35 ಸಾವಿರ ಅಪೌಷ್ಠಿಕ ಮಕ್ಕಳಿದ್ದಾರೆ, ಮಾತೃಪೂರ್ಣ ಯೋಜನೆಯಡಿ ಯಾವ ಗರ್ಭಿಣಿಯರೂ ಊಟ ಮಾಡುತ್ತಿಲ್ಲ. ಕೇವಲ ಲೆಕ್ಕದಲ್ಲಿ ಮಾತ್ರ ತೋರಿಸಲಾಗುತ್ತಿದೆ. ಈ ಕುರಿತು ಸಮಗ್ರ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಕೃಷಿ ಹೊಂಡ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಿಸಬೇಕು. ಕೃಷಿ, ತೋಟಗಾರಿಕೆ ರೇಷ್ಮೆ, ಅರಣ್ಯ ಇಲಾಖೆ ಅಧಿಕಾರಿಗಳು ಸಮನ್ವಯೊಂದಿಗೆ ಕಾರ್ಯಕ್ರಮಗಳನ್ನು ಹಾಕಿಕೊಳ್ಳಬೇಕು ಎಂದು ಹೇಳಿದರು.

          ಜಿಲ್ಲೆಯ ಸಾಕ್ಷರತೆ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ವಯಸ್ಕರ ಶಿಕ್ಷಣ ಇಲಾಖೆ ಸಮನ್ವಯತೆಯಿಂದ ಕೆಲಸಮಾಡಬೇಕಾಗಿದೆ. ಒಂಭತ್ತನೆ ತರಗತಿ ಹಾಗೂ ಪ್ರಥಮ ಪಿ,ಯು.ಸಿ. ವಿದ್ಯಾರ್ಥಿಗಳಿಗೆ ಒಬ್ಬೊಬ್ಬ ಅನಕ್ಷರಸ್ಥರನ್ನು ದತ್ತು ನೀಡಿ ಓದು ಬರಹ ಕಲಿಸಿದರೆ 10 ಗ್ರೇಸ್ ಮಾಕ್ರ್ಸ್ ನೀಡುವ ಪದ್ಧತಿಯನ್ನು ಜಾರಿಗೊಳಿಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿದರು.

        ಈ ಯೋಜನೆಯಡಿ ಪಶು ಸಂಗೋಪನಾ ಇಲಾಖೆಯು ಒಳ್ಳೆಯ ತಳಿಗಳ ಹಸುಗಳನ್ನು ಖರೀದಿಸಿ ಅರ್ಹ ಫಲಾನುಭವಿಗಳಿಗೆ ವಿತರಿಸುವ ಮೂಲಕ ಶೇ.100 ರಷ್ಟು ಗುರಿ ಸಾಧಿಸಬೇಕು. ನರೇಗಾದಡಿ ಹಸು, ಕುರಿ ಶೆಡ್ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕು. ಗೊಬ್ಬರ ಗಿಡ, ನುಗ್ಗೆ ಗಿಡ ಇತರೆ ಗಿಡಗಳನ್ನು ಬೆಳೆಸಲು ಹಾಗೂ ಕೃಷಿ ನಿರ್ಮಾಣಕ್ಕೆ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು. ಸದರಿ ಯೋಜನೆಯಡಿ 60 ಹಸು ಹಾಗೂ 320 ಕುರಿ ವಿತರಣೆ ಗುರಿ ನೀಡಲಾಗಿದೆ ಎಂದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

          ಕಾಗಿನೆಲೆಯಲ್ಲಿ ಉಜಿರೆ ಮಾದರಿಯ ಸುಸಜ್ಜಿತ ಪ್ರಕೃತಿ ಚಿಕಿತ್ಸಾ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಆಯುಷ್ ಇಲಾಖೆ ಅಧಿಕಾರಿಗಳು ಹಾಗೂ ಜಿಲ್ಲಾ ಅರೋಗ್ಯಾಧಿಕಾರಿಗಳು ಕಾಗಿನೆಲೆ ಪ್ರಾಧಿಕಾರ ಆಯುಕ್ತರೊಂದಿಗೆ ಸಮನ್ವಯ ಸಾಧಿಸಿಕೊಂಡು ಕಾರ್ಯಕ್ರಮಗಳ ಆಯೋಜನೆಗೆ ಮುಂದಾಗಬೇಕು ಎಂದು ಸೂಚಿಸಿದರು.

           ಮಾನವ ಅಭಿವೃದ್ಧಿಗಾಗಿ ಎಲ್ಲ ಇಲಾಖೆ ಅಧಿಕಾರಿಗಳು ಕೈಜೋಡಿಸಬೇಕು. ತರಬೇತಿ, ಶಿಕ್ಷಣ ಹಾಗೂ ಇತರೆ ಕಾರ್ಯಕ್ರಮಗಳನ್ನು ಸಮಗ್ರವಾಗಿ ಹಾಕಿಕೊಳ್ಳಬೇಕು. ತಾಲೂಕು ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳಿಗೆ ಸಭೆನಡೆಸಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಜವಾಬ್ದಾರಿ ಜಿಲ್ಲಾ ಮಟ್ಟದ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು.

         ಸಭೆಯಲ್ಲಿ ಜಿಲ್ಲಾ ಪಂಚಾಯತ ಸಹಾಯಕ ಕಾರ್ಯದರ್ಶಿ ಜಾಫರ ಸುತಾರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ರೀಮತಿ ಚೈತ್ರಾ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸುರೇಶ ರೆಡ್ಡಿ, ಬಿ.ಸಿ.ಎಂ. ಇಲಾಖೆ ಅಧಿಕಾರಿ ಜಮಖಾನೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಡಾ.ಎಚ್.ಎಸ್.ರಾಘವೇಂದ್ರಸ್ವಾಮಿ, ಪಶು ಸಂಗೋಪನಾ ಇಲಾಖೆ ಡಾ,ರಾಜು ಕೂಲೇರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದೆನಪ್ಪ ವಡಗೇರಿ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link