ಬಳ್ಳಾರಿ
ಕೂಡ್ಲಿಗಿ ಬಳಿ ಸೋಮವಾರ ಬೆಳಗಿನ ಜಾವ ಉಂಟಾದ ಅಪಘಾತದಲ್ಲಿ ಗಾಯಗೊಂಡು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಅವರು ವಿಚಾರಿಸಿದರು.
ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಖಾಸಗಿ ವಾಹನದ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡು ವಿಮ್ಸ್ ಆಸ್ಪತ್ರೆಯಲ್ಲಿ ಐದು ಜನ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯವನ್ನು ವಿಚಾರಿಸಿದರು. ಗುಣಮಟ್ಟದ ಚಿಕಿತ್ಸೆ ನೀಡುವಂತೆ ಸ್ಥಳದಲ್ಲಿದ್ದ ವೈದ್ಯರಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಬಳ್ಳಾರಿ ತಹಸೀಲ್ದಾರ್ ನಾಗರಾಜ ಹಾಗೂ ಇನ್ನಿತರರು ಇದ್ದರು.