ಮುಂಬೈ:
ಮಹಾರಾಷ್ಟ್ರದಲ್ಲಿ ಚುನಾವಣೆ ಘೋಷಣೆಯಾದಾಗಿನಿಂದ ರಾಜ್ಯ ರಾಜಕೀಯದಲ್ಲಿ ಕಂಡೂ ಕೇಳರಿಯದ ಬೆಳವಣಿಗೆಗಳು ಆಗುತ್ತಿದ್ದು ಮಹಾರಾಷ್ಟ್ರದ ಪ್ರತಿಷ್ಟಿತ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ವರ್ಲಿ ಕ್ಷೇತ್ರದಿಂದ ಶಿವಸೇನೆ ಬಾಳಾ ಠಾಕ್ರೆಯವರ ಮೊಮ್ಮಗ ಆದಿತ್ಯ ಠಾಕ್ರೆ ನಾಮಪತ್ರ ಸಲ್ಲಿಸಿದ್ದಾರೆ. ಆದಿತ್ಯ ಠಾಕ್ರೆ ನಾಮಪತ್ರ ಸಲ್ಲಿಕೆ ವೇಳೆ ಅವರ ತಂದೆ ಹಾಗೂ ಶಿವಸೇನೆ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ, ಹಾಗೂ ಸಾವಿರಾರು ಬೆಂಬಲಿಗರು ಭಾಗವಹಿಸಿದ್ದರು.
ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಆದಿತ್ಯ ಠಾಕ್ರೆ ತನ್ನ ತಾತ ಬಾಳಾ ಠಾಕ್ರೆ ಅವರ ತಂದೆ ಪಾಲಿಸಿದ ಅಘೋಷಿತ ನಿಯಮವನ್ನು ಮುರಿದು ಮಹಾರಾಷ್ಟ್ರ ವಿಧಾನಸಬೆಗೆ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಆದಿತ್ಯ ಠಾಕ್ರೆಯವರು ಉಪ ಮುಖ್ಯಮಂತ್ರಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆಂದು ರಾಜಕೀಯದಲ್ಲಿ ಉಹಾಪೋಹಗಳು ಹರಿದಾಡುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ