ಶಿರಮಗೊಂಡನಹಳ್ಳಿ: ಅದ್ದೂರಿ ಬಸವ ಜಯಂತಿ

ದಾವಣಗೆರೆ:

      ತಾಲ್ಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಜಗಜ್ಯೋತಿ ಶ್ರೀಬಸವೇಶ್ವರ ಜಯಂತಿ ಅದ್ದೂರಿಯಾಗಿ ನೆರವೇರಿತು.
ಗ್ರಾಮದ ಶ್ರೀಚನ್ನಬಸವೇಶ್ವರ ದೇವಸ್ಥಾನ ಸಮಿತಿ ಮತ್ತು ಗ್ರಾಮಸ್ಥರ ಸಹಯೋಗದಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ್ದ ಅನುಭವ ಮಂಟಪದ ಪ್ರಾತ್ಯಕ್ಷಿಕೆಯನ್ನು ನಿರ್ಮಿಸಲಾಗಿತ್ತು. ಶ್ರೀಬಸವೇಶ್ವರ, ಅಕ್ಕಮಹಾದೇವಿ, ಚನ್ನಬಸವಣ್ಣ ಸೇರಿದಂತೆ ಇತರೆ ಶರಣರ ಛದ್ಮ ವೇಷ ಧರಿಸಿದ್ದ ಮಕ್ಕಳನ್ನು ಟ್ಯಾಕ್ಟರ್‍ನಲ್ಲಿ ಕುಳ್ಳರಿಸಿ ಮೆರವಣಿಗೆ ಮಾಡಲಾಯಿತು.

       ಅಲ್ಲದೇ, ಗ್ರಾಮದ ಅನ್ನದಾತರು ತಮ್ಮ ಎತ್ತುಗಳಿಗೆ ವಿಶೇಷ ಅಲಂಕಾರ ಮಾಡಿ, ಬಸವ ಜಯಂತಿಯ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಿ, ಹೋಳಿಗೆ, ಒಬ್ಬಟ್ಟಿನ ನೈವೇದ್ಯವಿಟ್ಟು ಭಕ್ತಿ ಸಮರ್ಪಿಸಿದರು.ಬಸವೇಶ್ವರ ಭಾವಚಿತ್ರದ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮೆರವಣಿಗೆಯಲ್ಲಿ ಅಲಂಕೃತ ಎತ್ತುಗಳು ಭಾಗವಹಿಸಿದ್ದು ವಿಶೇಷವಾಗಿತ್ತು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ