ವಾಯು ಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆ

ಹಾವೇರಿ

        ವಾಯು ಮಾಲಿನ್ಯವನ್ನು ತಡೆಗಟ್ಟಲು ಎಲ್ಲರೂ ಗಿಡಮರಗಳನ್ನು ಬೆಳೆಸುವುದು ಅತ್ಯಗತ್ಯವಾಗಿದೆ ಎಂದು ಪರಿಸರ ಅಧಿಕಾರಿ ಎಂ.ಎಸ್.ಮಹೇಶ್ವರಪ್ಪ ಅವರು ಹೇಳಿದರು.

       ಇತ್ತೀಚೆಗೆ ನಗರದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಕಚೇರಿ ಆವರಣದಲ್ಲಿ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

       ಜೈವಿಕ ಇಂಧನ ಬಳಕೆಗೆ ಒತ್ತು ನೀಡುವುದರ ಮೂಲಕ ವಾಯುಮಾಲಿನ್ಯವನ್ನು ತಡೆಯಲು ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

      ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ದೀಪಕ ಎಲ್., ಕಚೇರಿ ಅಧೀಕ್ಷಕ ಚಂದ್ರಶೇಖರ ಎಂ.ಕವಲಿ, ಶ್ರೀಪಾದ ಬ್ಯಾಳಿಯವರ, ವಿ,ಜಿ.ನಾಯಕ, ಗುರುಮೂರ್ತಿ, ಸತೀಶ ವೈ.ಆರ್. ಮೆಹಬೂಬಲಿ ಹೋಟೆಗಾಳಿ ಹಾಗೂ ಇತರರು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link