ಬೆಂಗಳೂರು 
ಕೂಲಿ ಕಾರ್ಮಿಕರಿಗೆ ದುಡಿಯುವ ವರ್ಗಗಳಿಗೆ 18 ಸಾವಿರ ಕನಿಷ್ಠ ವೇತನ ನಿಗದಿಗೊಳಿಸುವಂತೆ ಒತ್ತಾಯಿಸಿ ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿದ ಯೂನಿಯನ್ನ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರವು ಬಂಡವಾಳ ಶಾಹಿಗಳ ಪರವಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ. ಕಂಪನಿಗಳಿಗೆ ಕೋಟ್ಯಂತರ ರೂಪಾಯಿ ದೇಣಿಗೆ ನೀಡಿ ಕಾರ್ಮಿಕರಿಗೆ ವೇತನ ನೀಡಲು ಮೀನ ಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಧಿಕ್ಕಾರ ಕೂಗಿದರು.
2013ರ ಲೋಕಸಭಾ ಚುನಾವಣೆ ವೇಳೆ ಹಲವು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ ಜನವಿರೋಧಿ ನೀತಿ ಪ್ರದರ್ಶನ ಮಾಡಿತು. ಅಲ್ಲದೇ ಕಾರ್ಮಿಕರನ್ನು ಕಾಲ ಕಸದಂತೆ ನಡೆಸಿಕೊಂಡಿತು. ಕಾರ್ಮಿಕರನ್ನು ಗುಲಾಮರಂತೆ ನಡೆಸಿಕೊಂಡರೆ ದೇಶದ ಅಭಿವೃದ್ಧಿಗೆ ಮಾರಕ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಕಾರ್ಮಿಕ ಕಾನೂನುಗಳ ಸುಧಾರಣೆ ಹೆಸರಿನಲ್ಲಿ ಬಂಡವಾಳಶಾಯಿಗಳನ್ನು ಓಲೈಸಲಾಗುತ್ತಿದೆ. ಕಾಪೆರ್Çರೇಟ್ ವಲಯದ ಪರವಾರ ಕಾನೂನುಗಳಿಗೆ ತಿದ್ದುಪಡಿ ತರಬೇಕು. ಸಮರ್ಪಕ ಉದ್ಯೋಗ ನೀತಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಐಟಿಯುಸಿ ಪ್ರಧಾನ ಕಾರ್ಯದರ್ಶಿ ಎಂ.ಡಿ.ಹರಿಗೋವಿಂದ, ನಿಗದಿತ ಕಾಲಾವಧಿ ಕೆಲಸದ ಪದ್ಧತಿ ರದ್ದಾಗಬೇಕು. ಸಮಾನ ಕೆಲಸಕ್ಕೆ ಸಮಾನ ವೇತನ ಎಂಬುವುದು ಸರ್ವೋಚ್ಚ ನ್ಯಾಯಾಲಯದ ತೀರ್ಮಾನವಾಗಿದೆ ಕೇಂದ್ರ ಹಾಗೂ ರಾಜ್ಯ ತೀರ್ಮಾನವನ್ನು ಜಾರಿ ಮಾಡಬೇಕೆಂದು ಒತ್ತಾಯ ಮಾಡಿದರು.
ರಾಜ್ಯ ಸರ್ಕಾರ ಸ್ಥಾಯಿ ಆದೇಶ ಕಾನೂನಿ ಅನ್ವಯ ಐಟಿ ವಲಯಕ್ಕೆ ಯಾವುದೇ ವಿನಾಯಿತಿ ನೀಡಬಾರದು.ಅದೇರೀತಿ, 10 ಲಕ್ಷ ಐಟಿ ಕಾರ್ಮಿಕರಿಗೆ ಕೆಲಸದ ಭದ್ರತೆ ನೀಡುವ ಕ್ರಮಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








