ಬಿಜೆಪಿಗೆ ಅಲೆಮಾರಿ ಸಮುದಾಯಗಳ ಬೆಂಬಲ ಘೋಷಣೆ

ದಾವಣಗೆರೆ:

        ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ವಿವಿಧ ಯೋಜನೆಗಳನ್ನು ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅಸಂಘಟಿತ ಸಮುದಾಯ ಅಲೆಮಾರಿ ಸಮುದಾಯದ ಬುಡಕಟ್ಟು ಜನಾಂಗದವರು ಬೆಂಬಲ ಘೋಷಿಸಿದ್ದಾರೆ.

         ಬುಧವಾರ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಅಲೆಮಾರಿ ಬುಡಕಟ್ಟು ಮಹಾಸಭಾ ಪ.ಜಾತಿ ಮತ್ತು ಪ.ವರ್ಗ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಕೆ.ವಿರೇಶ್ ಮಾತನಾಡಿ, ದೇಶದಲ್ಲಿ ಪ್ರಥಮ ಬಾರಿಗೆ ಅಲೆಮಾರಿ ಸಮುದಾಯಗಳ ಕಲ್ಯಾಣಕ್ಕಾಗಿ ರಾಷ್ಟ್ರೀಯ ಅಲೆಮಾರಿ ಅಭಿವೃದ್ಧಿ ಕೋಶ ಸ್ಥಾಪಿಸಿ 1.30 ಲಕ್ಷ ಕೋಟಿ ರೂ. ಅನುದಾನ ಮೀಸಲಿಟ್ಟಿದ್ದಾರೆ ಎಂದು ಹೇಳಿದರು.

        ದೇಶದ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅವಶ್ಯಕತೆ ಇದೆ. ದೇಶದ ಭದ್ರತೆಗಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಗಡಿಯೊಳಗೆ ನುಗ್ಗಿ ಏರ್ ಸ್ಟ್ರೈಕ್ ಮಾಡಿರುವುದು, ಸೇನೆಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹಾಗೂ ಸೈನಿಕರಿಗೆ ಬುಲೆಟ್ ಪ್ರೂಫ್ ಜಾಕೇಟ್ ನೀಡಿರುವುದು ಮೋದಿ ಸರಕಾರದ ಸಾಧನೆಯಾಗಿದೆ ಎಂದರು.

        ಭಾರತಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಕತ್ತಲೆಯಲ್ಲಿದ್ದ 18,450 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ, ಬಡವರಿಗೆ ಕಡಿಮೆ ದರದಲ್ಲಿ ಜನರಿಕ್ ಔಷಧಿ ಸಿಗುವಂತೆ ಮಾಡಿರುವುದಲ್ಲದೇ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಶೇ 10 ರಷ್ಟು ಮೀಸಲಾತಿ, ರೈತರಿಗೆ ಕಿಸಾನ್ ಪತ್ರ, ಸ್ವಚ್ಚ ಭಾರತ ಅಭಿಯಾನ, ಆಯುಷ್ಮಾನ್ ಭಾರತ ಆರೋಗ್ಯ ವಿಮೆ, ಬಡವರಿಗೆ ಎಲ್‍ಪಿಜಿ ಗ್ಯಾಸ್ ಸೇರಿದಂತೆ ಮೊದಲಾದ ಅಭಿವೃದ್ಧಿ ಕಾರ್ಯಗಳು ಜಾರಿಗೆ ತರಲಾಗಿದೆ ಎಂದರು.

        ಜಿಲ್ಲೆಯಲ್ಲಿ ಸುಮಾರು 44,300 ನಮ್ಮ ಸಮುದಾಯದ ಮತಗಳಿದ್ದು, ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಂ ಸಿದ್ದೇಶ್ವರ್ ಅವರಿಗೆ ಬೆಂಬಲ ನೀಡುವ ಮೂಲಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ಸಹಕಾರ ನೀಡುತ್ತೇವೆ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಜಯಣ್ಣ, ಮಹಾಂತೇಶ್, ಮಂಜಣ್ಣ, ಮಂಜುನಾಥ್, ಸುರೇಶ್, ನಾಗರಾಜ್, ಮೇದಾರ ಗೀರೀಶ್, ಮಾರಪ್ಪ ಮತ್ತಿತರರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link