ತುಮಕೂರು
ಪೊಲೀಸ್ ಇಲಾಖೆ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ನಗರದಲ್ಲಿ ಅನಧಿಕೃತ ಆಟೋ ರಿಕ್ಷಾಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಪ್ರಯಾಣಿಕರ ಆಟೋ ರಿಕ್ಷಾಗಳಿಗೆ ಟಿ.ಟಿ.ಪಿ ನಂಬರ್ ನೀಡಲು ನಗರದ ಚಿಲುಮೆ ಸಮುದಾಯ ಭವನದಲ್ಲಿ ನೋಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.ಈ ಅಭಿಯಾನದಲ್ಲಿ ನಗರದಲ್ಲಿ ಸಂಚರಿಸುವ ಎಲ್ಲಾ ಆಟೋ ಚಾಲಕರು, ಮಾಲೀಕರು ಅಗತ್ಯ ದಾಖಲಾತಿಗಳನ್ನು ಒದಗಿಸಿ ಟಿ.ಟಿ.ಪಿ(TUMKUR TRAFIC POLICE )ನಂಬರ್ ಪಡೆಯಬಹುದಾಗಿದೆ ಎಂದು ಸಂಚಾರ ಪೊಲೀಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
