ಕೃಷ್ಣಾ ನೀರಿನ ಮರು ಹಂಚಿಕೆ : ಸರ್ವ ಪಕ್ಷ ಸಭೆ ಕರೆಯಲು ಎಂಬಿ ಪಾಟೀಲ್ ಆಗ್ರಹ ಗೆ

ಬೆಂಗಳೂರು

       ಕೃಷ್ಣಾ ನೀರಿನ ಮರು ಹಂಚಿಕೆ ಕುರಿತು ಹೊಸ ನ್ಯಾಯಾಧೀಕರಣ ರಚನೆ ಸಂಬಂಧ ಚರ್ಚಿಸಲು ಸರ್ಕಾರ ಆದಷ್ಟು ಬೇಗ ಸರ್ವಪಕ್ಷ ಸಭೆ ಕರೆಯುವಂತೆ ಮಾಜಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

     ಕೇಂದ್ರ ಜಲಶಕ್ತಿ ಸಚಿವರು ಹಾಗೂ ಆಂಧ್ರ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳ ನಡುವಿನ ಸಭೆಯ ವರದಿಗಳು ಮಾಧ್ಯಮದಲ್ಲಿ ಪ್ರಕಟವಾಗಿರುವದನ್ನು ಗಮನಿಸಿದ್ದು, ಮಾಧ್ಯಮಗಳ ವರದಿಯಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರಸಿಂಗ್ ಶೇಖಾವತ್ ಹೇಳಿಕೆ ಗೊಂದಲಮಯವಾಗಿದೆ . ಕೃಷ್ಣಾ ನ್ಯಾಯಾಧೀಕರಣ ತೀರ್ಪಿನ ಕುರಿತು ನಮಗೆ ಅನ್ಯಾಯ ಆಗಿದೆ ಎಂದು ರಾಜ್ಯಗಳ ವಿಭಜನೆಯ ನಂತರ ತೆಲಂಗಾಣ ಮತ್ತು ಆಂಧ್ರಪ್ರದೇಶಗಳು ಪರಸ್ಪರ ಸುಪ್ರಿಂ ಕೋರ್ಟ್ ಹಾಗೂ ನ್ಯಾಯಾಧೀಕರಣದಲ್ಲಿ ದಾವೆ ಹೂಡಿವೆ ಎಂದು ಹೇಳಿದ್ದಾರೆ.

      ನ್ಯಾಯಾಧೀಕರಣ ಈಗಾಗಲೇ ನಿರ್ಣಯಿಸಿದಂತೆ ಇದು ಆ ಎರಡೂ ರಾಜ್ಯಗಳ ನಡುವಿನ ಆಂತರಿಕ ವ್ಯಾಜ್ಯವಾಗಿದೆ . ರಾಜ್ಯ ಪುನರ್ ವಿಂಗಡನೆ ಕಾಯ್ದೆ ಸೆಕ್ಷನ 80 ರ 4500  ಈಗಾಗಲೇ ಬ್ರಿಜೇಶ್‍ಕುಮಾರ್ ನೇತೃತ್ವದ ಕೃಷ್ಣಾ ನ್ಯಾಯಾಧೀಕರಣ ತೀರ್ಪು ನೀಡಿದೆ . ಮತ್ತು ಸುಪ್ರೀಂಕೋರ್ಟ್‍ನಲ್ಲಿ ಕೇಂದ್ರ ಸರ್ಕಾರವು ಕೂಡ ಇದೇ ನಿಲುವನ್ನು ಪ್ರಮಾಣಪತ್ರದ ಮೂಲಕ ಸಲ್ಲಿಸಿದೆ . ಎರಡು ಆದ್ದರಿಂದ ಕೃಷ್ಣಾ ನ್ಯಾಯಾಧೀಕರಣ ತೀರ್ಪಿನ ನೀರಿನ ಮರು ಹಂಚಿಕೆ ರಾಜ್ಯಗಳಿಗೆ ಸೀಮಿತವಾಗಿದ್ದು , ಹೊರತು ಕರ್ನಾಟಕಕ್ಕೆ ಅಲ್ಲ . ಆದರೆ ಈ ಹಂತದಲ್ಲಿ ಕೇಂದ್ರದ ಮಂತ್ರಿಗಳು ಹಾಗೂ ಆಂಧ್ರ ಮತ್ತು ತೆಲಂಗಾಣದ ಮುಖ್ಯಮಂತ್ರಿಗಳ ಸಭೆ ಕರ್ನಾಟಕ ಹಿತಾಸಕ್ತಿಗೆ ಧಕ್ಕೆಯಾಗುವ ಅನುಮಾನಕ್ಕೆ ಎಡೆಮಾಡಿದೆ ಎಂದು ಹೇಳಿದ್ದಾರೆ.

      ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಮುಖ್ಯಮಂತ್ರಿಗಳು ಈ ಕೂಡಲೇ ಸರ್ವಪಕ್ಷ ಸಭೆ ಕರೆದು ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರವಾಗಿ ಮನವರಿಕೆ ಮಾಡುವದರ ಜೊತೆಗೆ ರಾಜ್ಯದ ನೀರಿನ ಹಿತಾಸಕ್ತಿ ಕಾಪಾಡಲು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು. ಕರ್ನಾಟಕದ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರ ಕೂಡಲೇ ಸ್ಪಷ್ಟನೆ ನೀಡುವಂತೆ ಎಂ.ಬಿ.ಪಾಟೀಲ್ ಮನವಿ ಮಾಡಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link