ಸಾಮಾನ್ಯ ಪ್ರವೇಶ ಪರೀಕ್ಷೆಗೆ ಸಿದ್ದತೆ : ಜಿಲ್ಲಾಧಿಕಾರಿ

ದಾವಣಗೆರೆ

       ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಏ.29 ಮತ್ತು 30 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ಹೇಳಿದರು.ಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸಿಇಟಿ ಪ್ರವೇಶ ಪರೀಕ್ಷೆ ಕುರಿತು ಪರೀಕ್ಷಾ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆಯಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

       ದಾವಣಗೆರೆ ನಗರದಲ್ಲಿ 16 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಏ.29 ರ ಸೋಮವಾರ ಬೆಳಿಗ್ಗೆ 10.30 ರಿಂದ 11.50 ರ ವರೆಗೆ ಜೀವಶಾಸ್ತ್ರ, ಮಧ್ಯಾಹ್ನ 02.30 ರಿಂದ 3.50 ರವರೆಗೆ ಗಣಿತ, ಏ.30 ರ ಮಂಗಳವಾರ ಬೆಳಿಗ್ಗೆ 10.30 ರಿಂದ 11.50 ರವರೆಗೆ ಭೌತಶಾಸ್ತ್ರ, ಮಧ್ಯಾಹ್ನ 02.30 ರಿಂದ 3.50 ರವರೆಗೆ ರಸಾಯನ ಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

       ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನೀಷೇಧಿತ ಸ್ಥಳವೆಂದು ಘೋಷಿಸಿ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಮುಂಜಾಗ್ರತಾ ಕ್ರಮಗಳಾಗಿ ಸೂಕ್ತ ಪೋಲೀಸ್ ಬಂದೋಬಸ್ತ್ ಮಾಡಲಾಗುವುದು.ಎಲೆಕ್ಟ್ರಾನಿಕ್ ಉಪಕರಣಗಳ ನಿಷೇಧ : ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಗಳಲ್ಲಿ ಕೈಗಡಿಯಾರ ಧರಿಸುವಂತಿಲ್ಲ. ಹಾಗೂ ಮೊಬೈಲ್ ಸೇರಿದಂತೆ ಇತರೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿಸಲಾಗಿದೆ.

         ಸಿಇಟಿ-2019 ಪ್ರವೇಶ ಪತ್ರದೊಂದಿಗೆ ಅಭ್ಯರ್ಥಿಯು ಸೆಕೆಂಡ್ ಪಿಯುಸಿ ಅಥವಾ 12 ನೇ ತರಗತಿಯ ಪ್ರವೇಶ ಪತ್ರ, ಬಸ್‍ಪಾಸ್, ವಾಹನ ಚಾಲನ ಪರವಾನಗಿ, ಪಾಸ್‍ಪೋರ್ಟ್, ಆಧಾರ್ ಕಾರ್ಡ್ ಅಥವಾ ಪಾನ್ ಕಾರ್ಡ್ ಇದರಲ್ಲಿ ಯಾವುದಾದರೊಂದು ಗುರುತಿನ ಚೀಟಿಯನ್ನು ತೆಗೆದುಕೊಂಡು ಹಾಜರಾಗಬೇಕು.

       ವೀಕ್ಷಕರು, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಅವಧಿ ಮುಗಿಯುವವರೆಗೆ ನಿರ್ವಹಿಸಬೇಕಾದ ಜವಾಬ್ದಾರಿ ಮತ್ತು ಕರ್ತವ್ಯಗಳ ಕುರಿತು ಅವರು ಸೂಚನೆಗಳನ್ನು ನೀಡಿದರು.ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಖರಪ್ಪ ಮಾತನಾಡಿ, ವಿಕಲಚೇತನ ಅಭ್ಯರ್ಥಿಗಳಿಗೆ ಸಂಬಂಧಿಸಿದ ದಾಖಲಾತಿಗಳನ್ನು ಹಾಜರುಪಡಿಸಬೇಕು. ಅವರ ಪರವಾಗಿ ಪರೀಕ್ಷೆ ಬರೆಯುವವವರು ಪರೀಕ್ಷೆ ಬರೆಯುವ ವಿದ್ಯಾರ್ಥಿಗಿಂತ ಕಡಿಮೆ ವಿದ್ಯಾರ್ಹತೆ ಉಳ್ಳವರಾಗಿರಬೇಕು.

      ವಿಕಲಚೇತನರಿಗೆ 10 ನಿಮಿಷ ಹೆಚ್ಚುವರಿ ಸಮಯ ನೀಡಲಾಗುವುದು. ಸೆರೆಬ್ರಲ್ ಪಾಲ್ಸಿಯಿಂದ ತೊಂದರೆಗೊಳಗಾಗಿರುವ ವಿದ್ಯಾರ್ಥಿಗಳಿಗೆ 20 ನಿಮಿಷ ಹೆಚ್ಚು ಕಾಲಾವಕಾಶ ನೀಡಲಾಗುವುದು ಎಂದರು.ಸಿಇಟಿ-ಪ್ರವೇಶ ನಿಯಮಾವಳಿ ಪ್ರಕಾರ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಗದಿಪಡಿಸುವ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಾಗಿರುತ್ತಾರೆ. ಆಯಾ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಗಳು ಜಿಲ್ಲಾಧಿಕಾರಿಗಳಿಗೆ ಪರೀಕ್ಷೆ ನಡೆಸುವಲ್ಲಿ ನೆರವಾಗುತ್ತಾರೆ ಎಂದರು.

       ಪರೀಕ್ಷಾ ಕೇಂದ್ರಗಳ ವಿವರ: ಮೋತಿವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು, ಎ.ವಿ ಕಮಲಮ್ಮ ಪಿಯು ಕಾಲೇಜ್, ಎ.ಆರ್.ಜಿ ಪಿಯು ಕಾಲೇಜ್, ಸರ್ಕಾರಿ ಪದವಿ ಪೂರ್ವ ಕಾಲೇಜು, ಡಿಆರ್‍ಎಮ್ ಸೈನ್ಸ್ ಪಿಯು ಕಾಲೇಜ್, ಶ್ರೀ ಸಿದ್ದಗಂಗಾ ಪದವಿ ಪೂರ್ವ ಕಾಲೇಜು, ಶ್ರೀ ತರಳಬಾಳು ಜಗದ್ಗುರು ಪದವಿ ಪೂರ್ವ ಕಾಲೇಜು, ಸರ್ಕಾರಿ (ಎಕ್ಸ್ ಮುನಿಸಿಪಲ್) ಪದವಿ ಪೂರ್ವ ಕಾಲೇಜು, ಅಥಣಿ ಕಾಂಪೋಸಿಟ್ ಪಿಯು ಕಾಲೇಜು, ರಾಜನಹಳ್ಳಿ ಸೀತಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀ ಅಜ್ಜಂಪುರ ಗೋವಿಂದಸ್ವಾಮಿ ಭಾಗ್ಯಲಕ್ಷ್ಮಿ ಕಾಂಪೋಸಿಟ್ ಪಿಯು ಕಾಲೇಜು, ಜಿ.ಎಮ್ ಹಾಲಮ್ಮ ಸ್ವತಂತ್ರ ಪಿಯು ಕಾಲೇಜ್, ಮಾಗನೂರು ಬಸಪ್ಪ ಪಿಯು ಕಾಲೇಜ್, ಶ್ರೀಮತಿ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸೈನ್ಸ್ ಪಿಯು ಕಾಲೇಜ್, ಸೆಂಟ್ ಜಾನ್ಸ್ ಸೈನ್ಸ್ ಪಿಯು ಕಾಲೇಜ್, ಶ್ರೀಮತಿ ಸರೋಜಲಿಂಗಮ್ಮ ಪಿಯು ಕಾಲೇಜ್‍ಗಳಲ್ಲಿ ಪರೀಕ್ಷೆಗಳು ನಡೆಯಲಿವೆ ಎಂದರು.ಸಭೆಯಲ್ಲಿ ಸಿಇಟಿ ಪರೀಕ್ಷೆ ನಡೆಯುವ ಕಾಲೇಜುಗಳ ಪ್ರಾಂಶುಪಾಲರು ಸೇರಿದಂತೆ ಇತರೆ ಅಧಿಕಾರಿಗಳು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link