ಮಂಗಳೂರು:
ತನ್ನ ಅಪ್ರಾಪ್ತ ಮಗಳ ಮೇಲೆ ತಂದೆಯೇ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬಂಟ್ವಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಆರೋಪಿಯನ್ನು ದಾವೂದ್ ಎಂದು ತಿಳಿದು ಬಂದಿದೆ. ಆರೋಪಿ ದಾವೂದ್ಗೆ ನಾಲ್ಕು ಜನ ಪತ್ನಿಯರಿದ್ದಾರೆ. ಕಾಮುಕ ತಂದೆ ಕಳೆದ ಕೆಲವು ದಿನಗಳಿಂದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ಹಿನ್ನೆಲೆ :
ಬಾಲಕಿಯ ಮೇಲೆ ಆಕೆಯ ಅಕ್ಕನ ಗಂಡ ಅತ್ಯಾಚಾರ ಎಸಗಿದ್ದ. ಈ ಸಂಬಂಧ ಸಂತ್ರಸ್ತೆಯ ತಾಯಿ ಬಂಟ್ವಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ,ಈ ವೇಳೆ ಆರೋಪಿ ತನ್ನ ತಪ್ಪು ಒಪ್ಪಿಕೊಂಡಿದ್ದಾನೆ. ಅಷ್ಟೇ ಅಲ್ಲದೇ ಬಾಲಕಿಯ ಮೇಲೆ ಆಕೆಯ ತಂದೆ ದಾವೂದ್ ಕೂಡ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರಿಗೆ ತಿಳಿಸಿದ್ದಾನೆ.
ಬಂಧಿತ ಆರೋಪಿಯ ಹೇಳಿಕೆಯಿಂದಾಗಿ ಪ್ರಕರಣವು ಹೊಸ ತಿರುವು ಪಡೆದುಕೊಂಡಿತ್ತು. ಈ ಕುರಿತು ಮಕ್ಕಳ ಸಹಾಯವಾಣಿಯ ಸಿಬ್ಬಂದಿಯು ಸಂತ್ರಸ್ತೆಯನ್ನು ವಿಚಾರಣೆ ಮಾಡಿತ್ತು. ಆಗ ತಂದೆ ದಾವೂದ್ ಕೃತ್ಯ ಬೆಳಕಿಗೆ ಬಂದಿದೆ.
ಪ್ರಕರಣದ ಕುರಿತಾಗಿ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಪರವಾಗಿ ಬಾಲಕಿಯ ಅಕ್ಕನ ಗಂಡ ಹಾಗೂ ತಂದೆ ದಾವೂದ್ ವಿರುದ್ಧ ಪೊಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.