ಬಳ್ಳಾರಿ
ಮಹಾನ್ ಮಾನವತಾವಾದಿ, ಸಂವಿಧಾನ ಶಿಲ್ಪಿ ಡಾ.ಬಿ.ಅರ್.ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ನಗರದ ಅಂಬೇಡ್ಕರ್ ಭವನದಲ್ಲಿ(ರೈಲ್ವೆ ಮೊದಲ ಗೇಟ್) ಭಾನುವಾರ ಆಚರಿಸಿಸಲಾಯಿತು.
ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಅಂಬೇಡ್ಕರ್ ಅವರ ಪ್ರತಿಮೆಗೆ ಹಾಗೂ ಅವರ ಬೃಹತ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮಿಸಿದರು.ಈ ಸಂದರ್ಭದಲ್ಲಿ ಚಿಗುರು ಕಲಾತಂಡದ ಹುಲುಗಪ್ಪ ನೇತೃತ್ವದ ಕಲಾವಿದರು ಕ್ರಾಂತಿ ಗೀತೆಗಳು ಹಾಗೂ ಮತದಾನ ಜಾಗೃತಿ ಗೀತೆಗಳನ್ನು ಪ್ರಸ್ತುತಪಡಿಸಿದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ನಿತೀಶ್, ಎಸ್ಪಿ ಲಕ್ಷ್ಮಣ ನಿಂಬರಗಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಪ್ಪ, ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಶುಭಾ ಸೇರಿದಂತೆ ಸಮಾಜಕಲ್ಯಾಣ ಹಾಗೂ ಇನ್ನೀತರ ಇಲಾಖೆಗಳ ಅನೇಕ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಮತ್ತು ಸಾರ್ವಜನಿಕರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ