ಡಾ.ಬಿ.ಆರ್.ಅಂಬೇಡ್ಕರ್ ಜಗತ್ತಿ ಶ್ರೇಷ್ಠ ಸ್ಕಾಲರ್-ಸಮಾಜ ಚಿಂತಕ : ಕೃಷ್ಣ ಬಾಜಪೇಯಿ

ಹಾವೇರಿ

       ಸಾಮಾಜಿಕ ನ್ಯಾಯ, ಸಮ ಸಮಾಜದ ಪ್ರತಿಪಾದನೆಯ ಮೂಲಕ ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ಕಲ್ಪಿಸಲು ಶ್ರಮಿಸಿದ ಜಗತ್ತಿನ ಶ್ರೇಷ್ಠ ಸಮಾಜ ಚಿಂತಕ ಹಾಗೂ ಜ್ಞಾನಿ, ಸ್ಕಾಲರ್ ಡಾ.ಬಿ.ಆರ್.ಅಂಬೇಡ್ಕರ್ ಎಂದು ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಬಣ್ಣಿಸಿದರು.

        ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಲಾದ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿಯ ಸರಳ ಸಮಾರಂಭದಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಚನೆಮಾಡಿ ಅವರು ಮಾತನಾಡಿದರು.

        ಕಾರ್ಮಿಕರು, ಮಹಿಳೆಯರು, ದಲಿತರು, ಶೋಷಿತರಿಗೆ ಪ್ರತ್ಯೇಕ ಸ್ಥಾನಮಾನಗಳು, ರಾಜಕೀಯ ಪ್ರಾತಿನಿತ್ಯದ ಮೂಲಕ ಸಮಾಜ ಮುಖ್ಯ ವಾಹಿನಿಗೆ ತರಬೇಕು ಎಂಬುದು ಅವರ ಕಾಳಜಿಯಾಗಿತ್ತು. ಈ ಕಾರಣಕ್ಕಾಗಿ ನಿರಂತರ ಹೋರಾಟ ಮಾಡಿದರು. ಅಸ್ಪಶ್ಯತಾ ನಿವಾರಣೆ, ದಮನಿತರಿಗೆ ವಿಶೇಷ ಪ್ರಾತಿನಿತ್ಯಕ್ಕಾಗಿ ಶ್ರಮಿಸಿದರು. ಸಂವಿಧಾನಬದ್ಧವಾಗಿ ಸಮಾನ ಹಕ್ಕುಗಳನ್ನು ದೊರಕಿಸಿಕೊಡಲು ಶ್ರಮಿಸಿದರು ಎಂದು ಹೇಳಿದರು.

       ಡಾ.ಬಿ.ಆರ್.ಅಂಬೇಡ್ಕರ್ ಅವರು ಅದ್ಬುತವಾದ ಜ್ಞಾನದ ಪ್ರತಿರೂಪ, ಅವರ ಅದ್ಭುತವಾದ ಪ್ರತಿಭೆ, ಜ್ಞಾನದ ಫಲವಾಗಿ ಅತ್ಯುತ್ತಮವಾದ ಭಾರತ ಸಂವಿಧಾನ ರಚನೆಯಾಗಿದೆ. ಸಾಮಾಜಿಕ ಸಮಾನತೆ, ಜಾತ್ಯಾತೀತ ತತ್ವಗಳು ಎಲ್ಲರಿಗೂ ಸಮಾನ ಹಕ್ಕುಗಳು ದೊರೆಯುವಂತೆ ಸಂವಿಧಾನ ರಚನೆಯಾಗಿದೆ ಎಂದು ಹೇಳಿದರು.

        ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿ.ಪಂ.ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಲೀಲಾವತಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಎಂದರೆ ಭಾರತ ಸಂವಿಧಾನ- ಭಾರತ ಸಂವಿಧಾನವೆಂದರೆ ಅಂಬೇಡ್ಕರ್ ಎಂಬ ಮಾತು ಜನಜನಿತವಾಗಿದೆ. ತುಳಿತಕ್ಕೊಳಗಾದವರ ಏಳ್ಗೆಗಾಗಿ ಶ್ರಮಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಸಿದ್ಧಾಂತಗಳು ಸಮಾಜದ ಆದರ್ಶಗಳಾಗಬೇಕು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

        ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ಚೈತ್ರಾ ಇತರ ಅಧಿಕಾರಿಗಳು ಹಾಗೂ ಸಮಾಜದ ವಿವಿಧ ಮುಖಂಡರು ಭಾಗವಹಿಸಿದ್ದರು

        ಪುತ್ಥಳಿಗೆ ಮಾಲಾರ್ಪಣೆ: ಇದಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿರುವ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಮಾಲಾರ್ಪಣೆ ಮಾಡಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಉಪವಿಭಾಗಾಧಿಕಾರಿ ಎನ್.ತಿಪ್ಪೇಸ್ವಾಮಿ ,ಸಮಾಜ ಕಲ್ಯಾಣ ಇಲಾಕೆ ಉಪನಿರ್ದೇಶಕಿ ಶ್ರೀಮತಿ ಚೈತ್ರಾ, ತಹಶೀಲ್ದಾರ ಶಿವಕುಮಾರ, ತಾ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಅನ್ನಪೂರ್ಣ ಇತರರು ಉಪಸ್ಥಿತರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link