ಸ್ವಾಭಿಮಾನಿ ಸೇನೆಯಿಂದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮ

ಹಿರಿಯೂರು :

        ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್‍ರವರ 128ನೇ ಜಯಂತೋತ್ಸವ ಕಾರ್ಯಕ್ರಮವನ್ನು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾ ಸಮಿತಿ ಹಾಗೂ ತಾಲ್ಲೂಕು ಸಮಿತಿ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‍ರವರ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡುವ ಮೂಲಕ ಆಚರಿಸಲಾಯಿತು.

        ಈ ಸಂದರ್ಭದಲ್ಲಿ ಹಿರಿಯೂರು ತಾಲ್ಲೂಕು ನೂತನ ಘಟಕವನ್ನು ಜಿಲ್ಲಾ ಅಧ್ಯಕ್ಷರಾದ ರಾಮಚಂದ್ರರವರು ರಚಿಸಿದರು. ಹಿರಿಯೂರು ತಾಲ್ಲೂಕು ಅಧ್ಯಕ್ಷರಾಗಿ ವಿ.ಶಿವಕುಮಾರ್, ತಾಲ್ಲೂಕು ಉಪಾಧ್ಯಕ್ಷರಾಗಿ ಪಿಟ್ಲಾಲಿ ತಿಪ್ಪೇಸ್ವಾಮಿ, ಜಿಲ್ಲಾ ಗೌರವ ಅಧ್ಯಕ್ಷರಾಗಿ ಬಬ್ಬೂರು ರಾಮಚಂದ್ರಪ್ಪ, ಹಾಗೂ ಯುವ ಘಟಕದ ಉಪಾಧ್ಯಕ್ಷರಾಗಿ ಜೆ.ಪಿ.ಅರುಣ್ ಹಾಗೂ ಅಲ್ಪಸಂಖ್ಯಾತರ ಸಂಘಟನಾ ಕಾರ್ಯದರ್ಶಿಯಾಗಿ ಸತ್ತರ್‍ಸಾಬ್‍ರವರನ್ನು ಆಯ್ಕೆ ಮಾಡಲಾಯಿತು.

      ಈ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಎಸ್.ಮೊಹಮ್ಮದ್ ಮೊಹಸಿನ್, ತಾಲ್ಲೂಕು ಉಪಾಧ್ಯಕ್ಷರಾದ ಮನುಘಾಟ್ ಕಾರ್ಯಾಧ್ಯಕ್ಷರಾದ ಸಾದಿಕ್, ಮೊಹಮ್ಮದ್ ಸಲ್ಲಾನ್, ಯುವ ಘಟಕದ ತಾಲ್ಲೂಕು ಅಧ್ಯಕ್ಷರಾದ ರಾಘವೇಂದ್ರ, ಸೇರಿದಂತೆ ಅನೇಕ ದಲಿತ ಮುಖಂಡರು ಹಾಗೂ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಭಾಗವಹಿಸಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ