ದಾವಣಗೆರೆ
ಏ.14 ರಂದು ಬೆಳಿಗ್ಗೆ ಡಾ.ಬಿ.ಆರ್.ಅಂಬೇಡ್ಕರ್‍ರವರ 128ನೇ ಜಯಂತಿ ಆಚರಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಛಾಯಾಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿದೇರ್ಶಕರಾದ ಶಿವಾನಂದ ಕುಂಬಾರ್, ಆರ್.ಟಿ.ಓ. ಲಕ್ಷ್ಮೀಕಾಂತ್.ಬಿ ನಾಲ್ವಾರ್, ಡಿಡಿಪಿಐ ಪಿ.ಪರಮೇಶ್ವರಪ್ಪ, ಡಿಹೆಚ್‍ಓ ತ್ರಿಪುಲಾಂಭ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶರಣಪ್ಪ ಬಿ.ಮುದಗಲ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಲಕ್ಷ್ಮೀಕಾಂತ್ ಬೊಮ್ಮನ್ನಾವರ್ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಸಮಾಜ ಬಂಧವರು ಸೇರಿದಂತೆ, ಇತರೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
