ಶಿಕ್ಷಕರ ವರ್ಗಾವಣೆ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಸಭೆ ಅಂಗಿಕಾರ

ಬೆಂಗಳೂರು

       ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ನಾಲ್ಕು ತಿದ್ದುಪಡಿಗಳನ್ನು ಮಾಡಲು ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಶಿಕ್ಷಕರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಮುಂದಾಗಿದೆ.

        ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಬರುವ ಅಧಿವೇಶನದಲ್ಲಿ ಶಿಕ್ಷಕರ ಕಾಯ್ದೆ ತಿದ್ದುಪಡಿ ಮಸೂದೆ ಮಂಡನೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

         1 ರಿಂದ 10ನೇ ತರಗತಿವರೆಗೆ ಅಧ್ಯಯನ ಮಾಡುವ 44.57 ಲಕ್ಷ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ಬರುವ ಶೈಕ್ಷಣಿಕ ವರ್ಷದಲ್ಲಿ ವಿತರಣೆ ಮಾಡುತ್ತಿದ್ದು, ಇದಕ್ಕಾಗಿ ವೆಚ್ಚ ಮಾಡುವ 77.60 ಕೋಟಿ ರೂಪಾಯಿ ಪ್ರಸ್ತಾವನೆಗೆ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಹೇಳಿದರು.

          ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 9.62 ಕೋಟಿ ರೂ ವೆಚ್ಚದಲ್ಲಿ ಔಷಧಿ ಕಿಟ್ ಗಳನ್ನು, ಬಾಲವಾಡಿ ಶಿಕ್ಷಣದ ಪುಸ್ತಕ ಹಾಗೂ ಇತರ ವಸ್ತುಗಳನ್ನು 19.77 ಕೋಟಿ ರೂಪಾಯಿ ವೆಚ್ಚದಲ್ಲಿ ವಿತರಿಸುವ ಪ್ರಸ್ತಾವನೆಗೂ ಸಹ ಸಂಪುಟ ಅನುಮೋದನೆ ನೀಡದೆ.

           ಬಜೆಟ್‍ನಲ್ಲಿ ಪ್ರಕಟಿಸಿದಂತೆ ರೈತರ ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ದರ ನಿಗದಿ ಮಾಡುವುದು ಸೇರಿದಂತೆ ರೈತರ ಎಲ್ಲ ಉತ್ಪನ್ನಗಳಿಗೆ ಸೂಕ್ತ ದರ ವ್ಯವಸ್ಥೆ ಕಲ್ಪಿಸಲು 500 ಕೋಟಿ ರೂಪಾಯಿ ವೆಚ್ಚದಲ್ಲಿ 500 ಕೃಷಿ ಉತ್ಪಾದಕ ಘಟಕಗಳನ್ನು ಸ್ಥಾಪಿಸಲು ಒಪ್ಪಿಗೆ ನೀಡಲಾಗಿದೆ. ಚಿಕ್ಕಮಗಳೂರು – ಬೇಲೂರು- ಸಕಲೇಶಪುರ ಹೊಸ ರೈಲು ಮಾರ್ಗವನ್ನು 652.80 ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ರಾಜ್ಯ ಲೋಕ ಸೇವಾ ಆಯೋಗದಲ್ಲಿ ಸೇವಾ ಹಿರಿತನದ ಆಧಾರದ ಮೇಲೆ ಷಡಕ್ಷರಸ್ವಾಮಿ ಅವರನ್ನು ಪ್ರಭಾರಿ ಅಧ್ಯಕ್ಷರನ್ನಾಗಿ ಮುಂದುವರೆಸಲು ಸಚಿವ ಸಂಪುಟ ಸಮ್ಮತಿಸಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap