ಆಡಳಿತ ವ್ಯವಸ್ಥೆ ನಿಸ್ತೇಜಗೊಂಡಿದೆ : ಯಡಿಯೂರಪ್ಪ

ಬೆಂಗಳೂರು

        ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಆಡಳಿತ ವ್ಯವಸ್ಥೆ ನಿಸ್ತೇಜಗೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ಆಪಾದಿಸಿದ್ದಾರೆ.

        ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ಈ ಸರ್ಕಾರದಲ್ಲಿ ಯಾರು ಯಾರ ಮಾತನ್ನೂ ಕೇಳದ ಪರಿಸ್ಥಿತಿಯಿದೆ. ಆಡಳಿತ ಯಂತ್ರ ದುರುಪಯೋಗವಾಗುತ್ತಿದೆ. ರಾಜ್ಯದಲ್ಲಿ ಅದರಲ್ಲೂ ಬೆಂಗಳೂರು ನಗರದಲ್ಲಿ ಹಾಡಹಗಲೇ ಸಮಾಜಘಾತುಕ ಶಕ್ತಿಗಳು ಕತ್ತಿ ಝಳಪಿಸುತ್ತಿವೆ ಎಂದಿದ್ದಾರೆ.

         ಈ ಕುರಿತು ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಅವರು, ವಿಜಯನಗರದಲ್ಲಿ ಸಿಗರೇಟ್ ತೆಗೆದುಕೊಂಡು ಹಣ ಕೇಳಿದ್ದಕ್ಕಾಗಿ ಚುಚ್ಚಿ ಕೊಲೆ ಮಾಡಿದ ಘಟನೆಯ ವೀಡಿಯೋದಲ್ಲಿ ವೈರಲ್ ಆಗಿದೆ. ಇದೊಂದು ಅಮಾನವೀಯ ಘಟನೆಯಾಗಿದ್ದು, ಬೆಂಗಳೂರಿನ ಕಾನೂನು ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದು ಹೇಳಿದ್ದಾರೆ.

         ಒಂದು ತಿಂಗಳಿನ ಹಿಂದೆ ಮಂಡ್ಯದಲ್ಲಿ ಸಾಲದ ಹಣ ಮರುಪಾವತಿಸಲಿಲ್ಲ ಎಂದು ಹೆಣ್ಣು ಮಗಳನ್ನು ಎಳೆದುಕೊಂಡು ಜೀಪ್‍ನಲ್ಲಿ ತೆಗೆದುಕೊಂಡು ಹೋದ ಪ್ರಕರಣ ಹಾಗೇ ಮುಚ್ಚಿಹೋಯಿತು. ಅಭಿವೃದ್ಧಿ ಕಾರ್ಯ ಒಂದೇ ಅಲ್ಲ, ಸರಕಾರದ ಎಲ್ಲಾ ಅಂಗಗಳೂ ಮುರಿದು ಬಿದ್ದಿವೆ. ಈ ರೀತಿ ಕಾನೂನು ವ್ಯವಸ್ಥೆ ಹದಗೆಟ್ಟರೆ, ಯಾವೊಬ್ಬ ಉದ್ದಿಮೆದಾರನೂ ರಾಜ್ಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವುದಿಲ್ಲ. ಈ ಎಲ್ಲ ಅಪರಾಧ ಘಟನೆಗಳು ರಾಜ್ಯದ ಅಭಿವೃದ್ಧಿ ಮತ್ತು ಹೂಡಿಕೆ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ ಎಂದಿದ್ದಾರೆ.

         ಇದೆಲ್ಲಕ್ಕೂ ಪೊಲೀಸ್ ವ್ಯವಸ್ಥೆಯಲ್ಲಿ ರಾಜಕೀಯ ಶಕ್ತಿಗಳ ಹಸ್ತಕ್ಷೇಪವೇ ಕಾರಣ. ಇತ್ತೀಚೆಗೆ ಜನಾರ್ದನ ರೆಡ್ಡಿಯವರನ್ನು ಬಂಧಿಸಿ ಬಿಡುಗಡೆಗೊಳಿಸಿರುವುದು ರಾಜಕೀಯ ಹಸ್ತಕ್ಷೇಪಕ್ಕೆ ತಾಜಾ ಉದಾಹರಣೆಯಾಗಿದೆ. ರಾಜಕೀಯ ಸೇಡು ತೀರಿಸಿಕೊಳ್ಳಲು, ಎಸಿಬಿ ಮತ್ತು ಇತರ ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ತಮಗೆ ಬೇಕಾದ ರೀತಿ ಎಸಿಬಿಯನ್ನು ದುರುಪಯೋಗ ಪಡಿಸಲಾಗುತ್ತಿದೆ ಎಂದು ಆಪಾದಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap