ಅಮೂಲ್ಯ ನ್ಯಾಯಾಂಗ ಬಂಧನ ವಿಸ್ತರಣೆ..!

ಬೆಂಗಳೂರು:

     ಸಿಎಎ ವಿರುದ್ಧ ಪ್ರತಿಭಟನೆಯಲ್ಲಿ  ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿ ಬಂಧಿನಕೊಳಗಾಗಿರುವ ಬೆಂಗಳೂರಿನ ವಿದ್ಯಾರ್ಥಿನಿ ಅಮೂಲ್ಯ ಲಿಯೊನಾಳ ನ್ಯಾಯಾಂಗ ಬಂಧನ ಅವಧಿ ಮಾರ್ಚ್ 5ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.

    ದೇಶದ್ರೋಹ ಆರೋಪದಡಿಯಲ್ಲಿ ಅಮೂಲ್ಯ ಲಿಯೊನಾರನ್ನು ಬಂಧಿಸಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ ಕೋರ್ಟ್ ಆದೇಶ ನೀಡಿತ್ತು. ಈಕೆಯ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 124ಎ(ದೇಶದ್ರೋಹ), 153ಎ ಮತ್ತು ಬಿ(ವಿಭಿನ್ನ ಗುಂಪುಗಳು ಮತ್ತು ಪ್ರಚೋದನೆಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ರಾಷ್ಟ್ರೀಯ ಏಕೀಕರಣಕ್ಕೆ ಪೂರ್ವಾಗ್ರಹ ಪೀಡಿತವಾಗಿ ವರ್ತಿಸುವುದು)ಅಡಿಯಲ್ಲಿ ಕೇಸು ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ