ಹೊರ ರಾಜ್ಯದಿಂದ ಬರುವವರ ಮೇಲೆ ನಿಗಾವಹಿಸಲಾಗುವುದು : ಶ್ರೀರಾಮುಲು

ಬೆಂಗಳೂರು

      ಯಾವುದೇ ಕಾರಣಕ್ಕೂ ಬೆಂಗಳೂರನ್ನು ಲಾಕ್ ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದು, ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು. ಹೊರ ರಾಜ್ಯದಿಂದ ಬರುವವರ ಮೇಲೆ ನಿಗಾವಹಿಸಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

     ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಯಾವುದೇ ಪರಿಸ್ಥಿತಿಯಲ್ಲಿಯೂ ಬೆಂಗಳೂರನ್ನು ಲಾಕ್ ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ.

    ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯ ಸೌಲಭ್ಯಗಳನ್ನು ಹೆಚ್ಚಿಸಲು ಆದ್ಯತೆ ನೀಡಲಾಗುವುದು.ಬೆಂಗಳೂರಿನ ಎಲ್ಲಾ ಶಾಸಕರನ್ನು ಕರೆದು ಸಭೆಯಲ್ಲಿ ಅನೇಕ ಸಲಹೆಗಳನ್ನು ಕೂಡ ಪಡೆದಿದ್ದಾರೆ.”ಎ” ಲಕ್ಷಣ ಇರುವ ಪ್ರಕರಣಗಳನ್ನು ಮಾತ್ರ ಕೋವಿಡ್ ಎಂದು ಪರಿಗಣಿಸಿ, ಕೋವಿಡ್ ಕೇರ್ ಗಳಿಗೆ ಸ್ಥಳಾಂತರ ಮಾಡಲಾಗುವುದು.ಹೊರ ರಾಜ್ಯದಿಂದ ಬಂದವರಲ್ಲಿ “ಎ” ಲಕ್ಷಣ ಇರುವವರನ್ನು ಗುರುತಿಸಿ ಅವರನ್ನೆಲ್ಲಾ ಕಡ್ಡಾಯವಾಗಿ ಕ್ವಾರಂಟೈನ್ ಮಾಡಬೇಕು ಎಂದು ಚರ್ಚಿಸಲಾಯಿತು ಎಂದರು.

    ಕೊರೊನಾ ರೋಗಿಗಳಿಗೆ ಊಟದ ವ್ಯವಸ್ಥೆ ಸರಿಯಿಲ್ಲ ಎಂಬ ಕಾಂಗ್ರೆಸ್‍ನ ಆರೋಪವನ್ನು ಪರಿಗಣಿಸಿದ ಮುಖ್ಯಮಂತ್ರಿಗಳು ಈಗಾಗಲೇ ಖಡಕ್ ಸೂಚನೆ ನೀಡಿ, ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದಾರೆ.ಅವರಿಗೆಲ್ಲ ಉತ್ತಮ ಆಹಾರವನ್ನೇ ನೀಡಲಾಗುತ್ತದೆ ಎಂದರು.ಬಿಜೆಪಿ ಶಾಸಕ ಸತೀಶ್ ರೆಡ್ಡಿ ಮಾತನಾಡಿ,ಸಭೆಯಲ್ಲಿ ಮುಖ್ಯಮಂತ್ರಿಗಳಿಗೆ ಕೊರೋನಾ ಹರಡುವಿಕೆ ಬಗ್ಗೆ ಎಲ್ಲಾ ಶಾಸಕರು ನಮ್ಮನಮ್ಮ ಅಭಿಪ್ರಾಯ ತಿಳಿಸಿದ್ದೇವೆ. ಖಾಸಗಿ ಆಸ್ಪತ್ರೆಗಳ ಗೊಂದಲ ಬಗೆಹರಿಸುವ ಬಗ್ಗೆ ಹಾಗೂ ಸಮರ್ಪಕ ಹಾಸಿಗೆಗಳ ವ್ಯವಸ್ಥೆ ಆಗಬೇಕು ಎಂದು ಕೆಲವರು ಸಲಹೆ ನೀಡಿದ್ದಾರೆ ಎಂದರು.

    ಅನಕ್ಷರಸ್ಥರು, ಕೂಲಿ ಕೆಲಸಗಾರರಿಗೆ ಕೊರೋನಾ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ.ಹೀಗಾಗಿ ಅವರಿಗೆಲ್ಲ ಹೆಚ್ಚು ಅರಿವು ಮೂಡಿಸುವ ಬಗ್ಗೆ ಅಭಿಪ್ರಾಯ ವ್ಯಕ್ತವಾಗಿದೆ.ಕೊರೋನಾಗೆ ನಿಗದಿತ ಔಷಧಿ ಕಂಡುಹಿಡಿಯುವವರೆಗೆ ಇದು ನಿಯಂತ್ರಣ ಆಗುವುದಿಲ್ಲ.ಹೀಗಾಗಿ ವೈದ್ಯಕೀಯ ಸೌಲಭ್ಯಗಳ ಹೆಚ್ಚಳಕ್ಕೆ ಸರ್ಕಾರ ಆದ್ಯತೆ ನೀಡುವಂತೆ ಸಭೆಯಲ್ಲಿ ಸಲಹೆ ನೀಡಿದ್ದಾರೆ.ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಸತೀಶ್ ರೆಡ್ಡಿ ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap