ಅಂಗನವಾಡಿ ಕಾರ್ಯಕರ್ತೆಯರಿಗೆ ಆಳುವ ಸರ್ಕಾರಗಳು ಜೀವನ ಭದ್ರತೆ ಒದಗಿಸಿ

ಹೂವಿನಹಡಗಲಿ :

    ಸುಮಾರು 45 ವರ್ಷಗಳಿಂದ ದುಡಿಯುತ್ತಾ ಬಂದಿರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜೀವನ ಭದ್ರತೆಯನ್ನು ಒದಗಿಸಬೇಕು ಎಂದು ಎಐಟಿಯುಸಿ ರಾಜ್ಯ ಸಂಚಾಲಕ ಶಾಂತರಾಜ್ ಜೈನ್ ಆಗ್ರಹಿಸಿದರು.

     ಅವರು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಡೆದಂತಹ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಪಟ್ಟಣದ ಲಾಲ್ ಬಹದ್ದೂರ್ ಶಾಸ್ತ್ರೀ ಸರ್ಕಲ್‍ನಲ್ಲಿ ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಕನಿಷ್ಠ 18 ಸಾವಿರ ವೇತನವನ್ನು ನಿಗಧಿಗೊಳಿಸುವಂತೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸಿ ಮತ್ತು ಡಿ ಗ್ರೂಪ್ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿದರು.

    ಅಂಗನವಾಡಿ ಕಾರ್ಯಕರ್ತೆಯರು ನಿವೃತ್ತಿ ಹೊಂದಿದಾಗ ಪಿಂಚಣಿ ವೇತನವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಬೇಕೆಂದು ಆಗ್ರಹಿಸಿದರು. ಈ ರೀತಿಯಾದ 7 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎ.ಐ.ಟಿ.ಯು.ಸಿ. ಸಂಘಟನೆ ಪ್ರತಿಭಟನೆಯನ್ನು ನಡೆಸಿತು.
ಅಂಗನವಾಡಿ ಕಾರ್ಯಕರ್ತೆಯರ ಫೆಡರೇಷನ್ ಅಧ್ಯಕ್ಷೆ ಎನ್.ಮಂಜುಳ, ಪ್ರಧಾನ ಕಾರ್ಯದರ್ಶಿ ಕಮಲಾಕ್ಷಿ ಮಾತನಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

     ಸಂಘಟನೆಯ ಕೊಟ್ರಮ್ಮ, ಜಯಾಬಾಯಿ, ಜೆ.ಇಂದಿರಾ, ಶಾಂತಿಬಾಯಿ, ದಾಕ್ಷಾಯಣಿ, ಕೆ.ನೀಲಮ್ಮ, ಬಿ.ಜಯಲಕ್ಷ್ಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಂತರ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap