ಅನಂತ ಕುಮಾರ್ ಹೆಗಡೆ ರಾಜಕೀಯದಲ್ಲಿ ಇರಲು ನಾಲಾಯಕ್:ಈಶ್ವರ್ ಖಂಡ್ರೆ

ಬೆಂಗಳೂರು

     ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಕನಕಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಏಸುಕ್ರಿಸ್ತನ ಪ್ರತಿಮೆ ವಿಚಾರವಾಗಿ ಬಿಜೆಪಿ ನಾಯಕರ ಆರೋಪಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿರುಗೇಟು ನೀಡಿದ್ದು, ಸಂಸದ ಅನಂತ್ ಕುಮಾರ್ ಹೆಗಡೆ ರಾಜಕೀಯದಲ್ಲಿ ಇರುವುದಕ್ಕೆ ನಾಲಾಯಕ್ ಎಂದು ಕಿಡಿಕಾರಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗಡೆ ಅಂತವರು ಈ ದೇಶಕ್ಕೇ ಮಾರಕ. ಸಚಿವ ಸಿ.ಟಿ. ರವಿ ಅಂತಹವರು ಆತ್ಮಾವಲೋಕನ ಮಾಡಿಕೊಳ್ಳಲಿ. ದೇಶದ ಏಕತೆಗೆ ಇವರ ಹೇಳಿಕೆಗಳು ಮಾರಕ ಎಂದು ಕಿಡಿಕಾರಿದರು.

    ದೇಶದಲ್ಲಿ ಎಲ್ಲ ಧರ್ಮದವರಿಗೂ ಬಾಳುವ ಸಮಾನ ಹಕ್ಕಿದೆ. ಆದರೆ ಧರ್ಮದ ಆಧಾರದ ಮೇಲೆ ಟೀಕೆ ಮಾಡುವುದು ಖಂಡನೀಯ. ಬಿಜೆಪಿಗರು ಕೋಮು ಭಾವನೆಗಳನ್ನು ಸೃಷ್ಟಿಸುವ ಕೆಲಸ ಮಾಡುತ್ತಿದ್ದಾರೆ. ಇವರು ರಾಜಕೀಯದಲ್ಲಿ ಇರಲೇಬಾರದು ಎಂದರು.ಬಿಜೆಪಿ ಪ್ರತಿಯೊಂದು ವಿಚಾರದಲ್ಲಿ ರಾಜಕೀಯ ಮಾಡುತ್ತದೆ. ಕೋಮುಭಾವನೆಗಳನ್ನು ಕೆರಳಿಸುತ್ತದೆ ಎಂದು ಖಂಡ್ರೆ ಆರೋಪಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link