ಹೊಸಪೇಟೆ :
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬಿಜೆಪಿ ಪಕ್ಷವೂ ಈಗಾಗಲೇ ರೂಪರೇಷಗಳನ್ನು ಸಿದ್ಧಪಡಿಸುತ್ತಿದ್ದು ಡಿ. 17ರಂದ ಹೊಸಪೇಟೆಯಲ್ಲಿ ಸಭೆ ಕರೆಯಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಚೆನ್ನಬಸವನಗೌಡ ತಿಳಿಸಿದರು.
ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಚಿತಾಭಸ್ಮವನ್ನು ಹಂಪಿಯ ತುಂಗಭದ್ರಾ ನದಿಯಲ್ಲಿ ಶನಿವಾರ ವಿಸರ್ಜಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಹೊಸಪೇಟೆ ಸೇರಿದಂತೆ ಇತರ ಸ್ಥಳೀಯ ಸಂಸ್ಥೆಗಳಿಗೆ ಅಭ್ಯರ್ಥಿಗಳು ಸ್ಪರ್ಧಿಗೆ ಇಚ್ಛೆ ವ್ಯಕ್ತಪಡಿಸಿದ್ದಾರೆ. 17ರಂದು ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷವೂ ಸೋತ್ತಿದ್ದರೂ ಪಕ್ಷದ ಸಂಘಟನೆಯಲ್ಲಿ ಯಾವುದೇ ಹಿನ್ನೆಡೆಯಾಗಿಲ್ಲ ಎಂದರು.
ವಿಜಯನಗರ ಕ್ಷೇತ್ರದ ಮಂಡಲ ಅಧ್ಯಕ್ಷ ಅನಂತ ಪದ್ಮನಾಭ ಮಾತನಾಡಿ, ಸ್ಥಳೀಯ ಸಂಸ್ಥೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಸಾಕಷ್ಟು ಜನರಿದ್ದಾರೆ. ಚುನಾವಣೆಗೆ ಪಕ್ಷದಿಂದ ಈಗಾಗಲೇ ಅಗತ್ಯ ಕಾರ್ಯಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಡಿ. 17ರ ಸಭೆ ಬಳಿಕ ಶಕ್ತಿಕೇಂದ್ರಗಳ ಸಭೆ ನಡೆಸಲಾಗುವುದು, ನಂತರ ವಾರ್ಡ್ ಸಭೆಗಳನ್ನು ನಡೆಸಲಾಗುವುದು. ಪಕ್ಷ ಬಲಿಷ್ಠವಾಗಿದೆ. ಈ ಬಾರಿ ಹೊಸಪೇಟೆ ನಗರಸಭೆ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲಲಾಗುವುದು ಎಂದು ವಿಶ್ವಾಸವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಶಾಸಕ ಸೋಮಲಿಂಗಪ್ಪ, ಮಾಜಿ ಶಾಸಕ ನೇಮಿರಾಜ್ ನಾಯಕ್, ಮೃತ್ಯುಂಜಯ ಜಿನಗಾ, ಮುಖಂಡರಾದ ರಾಮಲಿಂಗಪ್ಪ, ಮುರಾರಿ ಗೌಡ, ಅನಿಲ್ ಜೋಶಿ, ಕಟಿಗಿ ರಾಮಕೃಷ್ಣ, ರಾಘವೇಂದ್ರ, ಶಂಕರ್ ಮೇಟಿ ಮುಂತಾದವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
