ಬೆಂಗಳೂರು
ಬರುವ ಶುಕ್ರವಾರ ಮಂಡಿಸಲಿರುವ ರಾಜ್ಯದ ಬಜೆಟ್‍ನಲ್ಲಿ ಬೇಡಿಕೆಗಳಿಗೆ ಸ್ಪಂದಿಸಲಾಗುವುದು ಎಂದು ಭರವಸೆ ನೀಡಿರುವ ಹಿನ್ನಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸೋಮವಾರದಿಂದ ಅಹೋರಾತ್ರಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಕೈಬಿಟ್ಟಿದ್ದಾರೆ.
ನಗರದ ಫ್ರೀಡಂ ಪಾರ್ಕ್‍ನಲ್ಲಿ ಕಾರ್ಮಿಕರ ಕಾಯ್ದೆ ಜಾರಿಯ ಜತೆಗೆ, ಸಮಾನ ಕೆಲಸಕ್ಕೆ ಸಮಾನ ವೇತನ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರು ಮಂಗಳವಾರ ಮಧ್ಯಾಹ್ನ್ಲ ಬಜೆಟ್‍ನಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂತೆಗೆದುಕೊಂಡು ಊರುಗಳಿಗೆ ಮರಳಿದ್ದಾರೆ.
ರಾಜ್ಯ ಸರ್ಕಾರ ಬಜೆಟ್ ನಲ್ಲಿ ತಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿದ್ದು ಬಜೆಟ್‍ನಲ್ಲಿ ಬೇಡಿಕೆ ಈಡೇರಿಯದಿದ್ದರೆ, ಕಾನೂನು ಹೋರಾಟದ ಜೊತೆಗೆ, ತಿಂಗಳುಗಟ್ಟಲೆ, ಅಹೋರಾತ್ರಿ ಅನಿರ್ದಿಷ್ಟವಾದಿ ಹೋರಾಟ ಮುಂದುವರೆಸಲಾಗುವುದು ಎಂದು ಸಂಘದ ಗೌರವಾದ್ಯಕ್ಷೆ ಜಯಲಕ್ಷ್ಮಿ ಅವರು ಎಚ್ಚರಿಕೆ ನೀಡಿದರು.
ಅಹೋರಾತ್ರಿ ಪ್ರತಿಭಟನಾನಿರತರಲ್ಲಿ 8ಕ್ಕೂ ಹೆಚ್ಚು ಅಸ್ವಸ್ಥರಾಗಿದ್ದು , ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿ ಹೆಚ್ .ಡಿ.ಕುಮಾರಸ್ವಾಮಿ ಪ್ರತಿಭಟನಾ ಸ್ಥಳಕ್ಕೆ ಬರಬೇಕೆಂದು ಪಟ್ಟು ಹಿಡಿದು ಕಾರ್ಯಕರ್ತೆಯರು ಪ್ರತಿಭಟನೆಯನ್ನು ತೀವ್ರಗೊಳಿಸಿದ್ದರು.
ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಫ್ರೀಡಂಪಾರ್ಕ್‍ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವುದರಿಂದ ಕುಡಿಯುವ ನೀರು ಶೌಚಾಲಯಕ್ಕೆ ತೀವ್ರ ತೊಂದರೆಯಾಗಿತ್ತು. ತಾತ್ಕಾಲಿಕ ವ್ಯವಸ್ಥೆ ಕಲ್ಪಿಸಿದೆಯಾದರೂ ಅದು ಸಾಕಾಗದೆ ಮಹಿಳೆಯರು ತೀವ್ರ ಸಂಕಷ್ಟ ಅನುಭವಿಸುವಂತಾಗಿದೆ.
ಇನ್ನೂ, ಪ್ರತಿಭಟನಾನಿರತ ಹಲವು ಮಹಿಳೆಯರಿಗೆ ಕಾರ್ಮಿಕ ಸಂಘಟನೆಗಳು ಸೇರಿದಂತೆ ಹಲವು ಸಂಘಟನೆಗಳು, ಸ್ವಯಂ ಸೇವಾ ಸಂಸ್ಥೆಗಳು ಬೆಂಬಲ ಸೂಚಿಸಿದ್ದವು .
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/02/anganwadi-story_647_0323170.gif)